newsics.com
ಹರಿಯಾಣ: ದಿನದಿಂದ ದಿನಕ್ಕೆ ರೈತರ ಪ್ರತಿಭಟನೆ ವಿಚಿತ್ರ ಸ್ವರೂಪಕ್ಕೆ ತಿರುಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ವ್ಯಕ್ತಿಯ ದೇಹದ ಭಾಗವನ್ನು ಕತ್ತರಿಸಿ ಬ್ಯಾರಿಕೇಡ್ಗಳಲ್ಲಿ ನೇತುಹಾಕಿರುವ ಅಮಾನವೀಯ ಘಟನೆ ಹರಿಯಾಣದ ಸಿಂಘು-ಕುಂಡ್ಲಿ ಗಡಿಯಲ್ಲಿ ನಡೆದಿದೆ.
ಇಂದು ಬೆಳಗಿನ ಜಾವ ಸಿಂಘು ಗಡಿಯಲ್ಲಿರುವ ರೈತರ ಪ್ರತಿಭಟನಾ ಮುಖ್ಯ ವೇದಿಕೆಯ ಬಳಿ 35 ವರ್ಷ ಆಸುಪಾಸಿನ ವ್ಯಕ್ತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಒಂದು ಕೈಯನ್ನು ಕತ್ತರಿಸಲಾಗಿದೆ.
ಸದ್ಯ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ರೈತರ ಆಕ್ರೋಶ ಮುಗಿಲು ಮುಟ್ಟಿದೆ. ಪರಿಸ್ಥಿತಿ ಹತೋಟಿಗೆ ತರಲು ಪೋಲೀಸರು ಯತ್ನಿಸುತ್ತಿದ್ದು, ಮೃತದೇಹವನ್ನು ಹತ್ತಿರದ ಸಿವಿಲ್ ಆಸ್ಪತ್ರೆಗೆ ಕೊಂಡೊಯ್ಯಲು ಅನುಮತಿ ನೀಡಲಾಗಿದೆ ಎಂದು ವರದಿ ತಿಳಿಸಿದೆ.