Friday, May 20, 2022

ಮಧ್ಯಪ್ರದೇಶದಲ್ಲೂ 16ರ ಬಾಲೆ ಮೇಲೆ ಸಾಮೂಹಿಕ ಅತ್ಯಾಚಾರ

Follow Us

newsics.com
ಭೋಪಾಲ್‌: ಉತ್ತರ ಪ್ರದೇಶದಲ್ಲಿ ಭಯ ಹುಟ್ಟಿಸುವ ಎರಡು ಅತ್ಯಾಚಾರ ಮತ್ತು ಕೊಲೆ. ಈ ಘಟನೆ ಬೆನ್ನಲ್ಲೇ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ 16 ವರ್ಷದ ಬಾಲಕಿಯ ಮೇಲೆ ಮೂವರು ಅಪರಿಚಿತರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 19 ವರ್ಷದ ದಲಿತ ಮಹಿಳೆ, ಹತ್ರಾಸ್‍ನಿಂದ ಸುಮಾರು 500 ಕಿ.ಮೀ. ದೂರದಲ್ಲಿರುವ ಬಲರಾಮ್‍ಪುರ್ ಗ್ರಾಮದಲ್ಲಿ ಕಾಮುಕರು 22 ವರ್ಷದ ದಲಿತ ಮಹಿಳೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಇಬ್ಬರೂ ಸಂತ್ರಸ್ತರು ಅಸುನೀಗಿದ ಘಟನೆ ಮಾಸುವ ಮುನ್ನವೇ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.
ಅಪ್ರಾಪ್ತ ಬಾಲಕಿ ಮತ್ತು ಆಕೆಯ ಸಹೋದರ ಕೃಷಿ ಜಮೀನಿನಲ್ಲಿದ್ದ ಗುಡಿಸಲಿನಲ್ಲಿ ವಾಸಿಸುತ್ತಿದ್ದರು. ಅಲ್ಲಿ ಅವರು ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ಖಾರ್ಗೋನ್ ಪೊಲೀಸ್ ವರಿಷ್ಠಾಧಿಕಾರಿ ಶೈಲೇಂದ್ರ ಸಿಂಗ್ ಚೌಹಾನ್ ಮಾಹಿತಿ ನೀಡಿದ್ದಾರೆ. ಸಂತ್ರಸ್ತೆ ವಾಸವಾಗಿದ್ದ ಸ್ಥಳಕ್ಕೆ ಬುಧವಾರ ಮಧ್ಯರಾತ್ರಿ ಮೂವರು ಅಪರಿಚಿತರು ಬಂದಿದ್ದಾರೆ. ಗುಡಿಸಲಿನಲ್ಲಿ ಮಲಗಿದ್ದ ಬಾಲಕಿಯನ್ನು ಎಳೆದೊಯ್ಯಲು ಯತ್ನಿಸಿದ್ದಾರೆ. ಅದಕ್ಕೆ ಆಕೆಯ ಸಹೋದರ ವಿರೋಧ ವ್ಯಕ್ತಪಡಿಸಿದಾಗ, ಆತನನ್ನು ಕೋಲುಗಳಿಂದ ಹೊಡೆದು ಪ್ರಜ್ಞೆ ತಪ್ಪಿಸಿದ್ದಾರೆ. ನಂತರ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿ, ರಸ್ತೆಯ ಬದಿಯಲ್ಲಿ ಆಕೆಯನ್ನು ಬಿಟ್ಟು ಓಡಿಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬಾಲಕಿ ಮತ್ತು ಆಕೆಯ ಸಹೋದರ ಪೊಲೀಸರಿಗೆ ದೂರು ನೀಡಿದ್ದು, ಮಧ್ಯಪ್ರದೇಶ ಪೊಲೀಸರು ಆರೋಪಿಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮಾತುಗಾರರ ಶೋಧಕ್ಕೆ ಮುಂದಾದ ಕಾಂಗ್ರೆಸ್‌ನಿಂದ ಭಾಷಣ ಸ್ಪರ್ಧೆ: ವಿಜೇತರಿಗೆ ಐಫೋನ್ ಬಹುಮಾನ

newsics.com ಬೆಂಗಳೂರು: ಯುವ ಮಾತುಗಾರರ ಶೋಧಕ್ಕೆ ಮುಂದಾಗಿರುವ ಕಾಂಗ್ರೆಸ್, ಇದಕ್ಕಾಗಿ ಭಾಷಣ ಸ್ಪರ್ಧೆಯನ್ನು ಆಯೋಜಿಸಿದೆ. ರಾಜ್ಯಮಟ್ಟದ ಈ ಭಾಷಣ ಸ್ಪರ್ಧೆಯಲ್ಲಿ ಗೆಲ್ಲುವ ಮಾತುಗಾರರಿಗೆ ಐಫೋನ್ ಸಿಗಲಿದೆ. ಅಷ್ಟೇ ಅಲ್ಲ,...

ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು, ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು

newsics.com ಗದಗ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು ಹಾಗೂ ಅದರಲ್ಲಿದ್ದ ನಾಲ್ವರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕುನ ನೆಲೋಗಲ್ ಗ್ರಾಮದ ಬಳಿ ಶುಕ್ರವಾರ ಈ ಘಟನೆ ನಡೆದಿದೆ. ನಿರಂತರ ಮಳೆಯಿಂದಾಗಿ ನೆಲೋಗಲ್-ಬೆಳ್ಳಟ್ಟಿ...

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

newsics.com ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಬೆದರಿಕೆ ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ...
- Advertisement -
error: Content is protected !!