ತಿರುವನಂತಪುರಂ: ಸೌದಿ ಅರೇಬಿಯಾದಿಂದ ಬಂದ ಪಾರ್ಸೆಲ್ ಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ತನಿಖೆಗೆ ಗುರಿಯಾಗಿರುವ ಸಚಿವ ಜಲೀಲ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮತ್ತು ಕಾಂಗ್ರೆಸ್ ಆಗ್ರಹಿಸಿದೆ. ತಿರುವನಂತಪುರಂ, ಕೊಲ್ಲಂ, ಕೋಝಿಕೋಡ್ ಸೇರಿದಂತೆ ರಾಜ್ಯದ ಹಲವೆಡೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಹಲವು ಪ್ರದೇಶಗಳಲ್ಲಿ ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಜಲ ಫಿರಂಗಿ ಬಳಸಿದರು. ಇದೇ ವೇಳೆ ಸಚಿವ ಜಲೀಲ್ ತಮ್ಮ ಮೇಲಿನ ಎಲ್ಲ ಆರೋಪಗಳನ್ನು ತಳ್ಳಿಹಾಕಿದ್ದಾರೆ.
ಶುಕ್ರವಾರ ಜಲೀಲ್ ಅವರನ್ನು ಜಾರಿ ನಿರ್ದೇಶನಾಲಯ ಮೂರುವರೆ ಗಂಟೆ ಗಳ ಕಾಲ ವಿಚಾರಣೆಗೆ ಗುರಿಪಡಿಸಿತ್ತು. ಸಚಿವ ಜಲೀಲ್ ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.