newsics.com
ನವದೆಹಲಿ: ದೇಶದ ಅತ್ಯುಚ್ಛ ಸಂಸ್ಥೆ ಭಾರತೀಯ ವೈದ್ಯಕೀಯ ಮಂಡಳಿ (ಎಂಸಿಐ) ಶುಕ್ರವಾರ ರದ್ದಾಗಿದ್ದು, ಇದರ ಬದಲಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಅಸ್ತಿತ್ವಕ್ಕೆ ಬಂದಿದೆ.
ನೂತನ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ದ ಅಧ್ಯಕ್ಷರನ್ನಾಗಿ ಏಮ್ಸ್‌ನ ಇಎನ್‌ಟಿ ವಿಭಾಗದ ಮಾಜಿ ಮುಖ್ಯಸ್ಥ ಡಾ. ಸುರೇಶ್ ಚಂದ್ರ ಶರ್ಮಾ ಅವರನ್ನು 3 ವರ್ಷಗಳ ಅವಧಿಗೆ ನಿಯೋಜಿಸಲಾಗಿದೆ.
ವೈದ್ಯಕೀಯ ಶಿಕ್ಷಣ ಕ್ಷೇತ್ರದ ಚಾರಿತ್ರಿಕ ಸುಧಾರಣೆಯಲ್ಲಿ ಉನ್ನತ ಶಿಕ್ಷಣ ನಿಯಂತ್ರಕರಾಗಿ ಕಾರ್ಯನಿರ್ವಹಿಸಲು ನಾಲ್ಕು ಸ್ವಾಯತ್ತ ಮಂಡಳಿಯೊಂದಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ರಚಿಸಲಾಗಿದೆ ಎಂದು ಮಾನವ ಸಂಪನ್ಮೂಲ ಸಚಿವಾಲಯ ಹೇಳಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ)ದ ನಿತ್ಯದ ಕಾರ್ಯಗಳಿಗೆ ಅನುಕೂಲವಾಗುವಂತೆ ಪದವಿಪೂರ್ವ ವೈದ್ಯಕೀಯ ಶಿಕ್ಷಣ ಮಂಡಳಿ, ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮಂಡಳಿ, ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿ ಹಾಗೂ ವೈದ್ಯಕೀಯ ನೋಂದಣಿ ಮಂಡಳಿ ಎಂಬ ನಾಲ್ಕು ಸ್ವಾಯತ್ತ ಸಂಸ್ಥೆಯನ್ನು ರಚಿಸಲಾಗಿದೆ.
ಅಡಕೆ ಸಂಶೋಧನೆಗೆ ಸರ್ಕಾರ ನಿರ್ಧಾರ