Monday, August 8, 2022

ನೀಟ್ ಪರೀಕ್ಷೆಗೆ ಹೆದರಿ ವೈದ್ಯಕೀಯ ಆಕಾಂಕ್ಷಿ ವಿದ್ಯಾರ್ಥಿ ಆತ್ಮಹತ್ಯೆ

Follow Us

newsics.com

ಚೆನ್ನೈ: ವೈದ್ಯಕೀಯ ಕಾಲೇಜು ಪ್ರವೇಶಕ್ಕೆ ಅರ್ಹತೆಯ ಮಾನದಂಡವಾಗಿರುವ ನೀಟ್ ಪರೀಕ್ಷೆಗೆ ಹೆದರಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತಪಟ್ಟ ವಿದ್ಯಾರ್ಥಿಯನ್ನು  ಪಿ ಧನುಷ್ ಎಂದು ಗುರುತಿಸಲಾಗಿದೆ.

ಧನುಷ್ ಬುಡಕಟ್ಟು ಜನಾಂಗಕ್ಕೆ ಸೇರಿದವರಾಗಿದ್ದಾರೆ. ಅವರ ತಂದೆ ಆಟೋ ಚಾಲಕರಾಗಿದ್ದಾರೆ. ಈ ಹಿಂದೆ ಧನುಷ್ ಅವರನ್ನು ಖಾಸಗಿ ಮೆಡಿಕಲ್ ಕಾಲೇಜಿಗೆ ಸೇರಿಸಲಾಗಿತ್ತು. ಅಲ್ಲಿ ಶಿಕ್ಷಣ ಶುಲ್ಕ ಭರಿಸಲು ಸಾಧ್ಯವಾಗದ ಕಾರಣ ಶಿಕ್ಷಣ ಮೊಟಕುಗೊಂಡಿತ್ತು. ಬಳಿಕ ಸರ್ಕಾರಿ ಸೀಟ್ ಪಡೆಯುವ ಸಲುವಾಗಿ ನೀಟ್ ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದರು. ಇದೀಗ ಪರೀಕ್ಷೆಗೆ ಕೆಲವೇ ದಿನಗಳು ಇರುವಾಗಲೇ ಧನುಷ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ತಮಿಳುನಾಡಿನಲ್ಲಿ ನೀಟ್ ಪರೀಕ್ಷೆಗೆ ಹೆದರಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದುವರೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ

ಶಿರಡಿ ಸಾಯಿಬಾಬನ ದರ್ಶನ ಪಡೆದ ನಟಿ ಶರ್ಮಿಳಾ ಮಾಂಡ್ರೆ

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!