Wednesday, September 28, 2022

ಮೆಡಿಕಲ್ ಪಿಜಿ ವಿದ್ಯಾರ್ಥಿಗಳಿಗೆ 3 ತಿಂಗಳು ಜಿಲ್ಲಾಸ್ಪತ್ರೆಯಲ್ಲಿ ಸೇವೆ ಕಡ್ಡಾಯ

Follow Us

newsics.com
ನವದೆಹಲಿ: ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು (ಎಂ.ಡಿ, ಎಂ.ಎಸ್‌) ತಮ್ಮ ಶೈಕ್ಷಣಿಕ ಅವಧಿಯಲ್ಲಿ (2020-21) ಮೂರು ತಿಂಗಳು ಜಿಲ್ಲಾ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವುದು ಕಡ್ಡಾಯ ಎಂದು ಭಾರತೀಯ ವೈದ್ಯಕೀಯ ಮಂಡಳಿ (ಎಂಸಿಐ) ಹೇಳಿದೆ.
ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ (ತಿದ್ದುಪಡಿ) ನಿಯಮಗಳು-2020ರ ಪ್ರಕಾರ, ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಅಂತಿಮ ಪರೀಕ್ಷೆಗೆ ಹಾಜರಾಗುವ ಮುನ್ನ, ಡಿಸ್ಟ್ರಿಕ್ಟ್ ರೆಸಿಡೆನ್ಸಿ ಪ್ರೋಗ್ರಾಂ (ಡಿಆರ್‌ಪಿ) ನ್ನು ತೃಪ್ತಿಕರವಾಗಿ ಪೂರ್ಣಗೊಳಿಸುವುದು ಅಗತ್ಯವಾಗಿದೆ ಎಂದು ಎಂಸಿಐ ಹೇಳಿದೆ.
ದೇಶಾದ್ಯಂತ ವೈದ್ಯಕೀಯ ಕಾಲೇಜುಗಳಲ್ಲಿ ಓದುತ್ತಿರುವ ಪಿ.ಜಿ ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ 3, 4 ಇಲ್ಲವೇ 5ನೇ ಸೆಮಿಸ್ಟರ್‌ನಲ್ಲಿ ರೊಟೇಷನ್ ಆಧಾರದಲ್ಲಿ ಜಿಲ್ಲಾ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಬೇಕು ಎಂಸಿಐ ಅಧಿಸೂಚನೆಯಲ್ಲಿ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಪಿಎಫ್ಐ ಸಂಘಟನೆ ಮೇಲೆ ನಿಷೇಧ: ಬೆಂಗಳೂರು ಸಹಿತ ರಾಜ್ಯದಲ್ಲಿ ಹೈ ಅಲರ್ಟ್

newsics.com ಬೆಂಗಳೂರು:  ದೇಶದಲ್ಲಿ ಪಿಎಫ್ಐ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ  ಗರಿಷ್ಟ ಮುನ್ನೆಚ್ಚರಿಕೆ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪೊಲೀಸ್ ಮಹಾ ನಿರ್ದೇಶಕ ಸೂದ್...

ವಾಟ್ಸಾಪ್ ಗ್ರೂಪ್ ನಲ್ಲಿ ಪರಿಚಯ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

newsics.com ಮಂಗಳೂರು: ವಾಟ್ಸಾಪ್ ಗ್ರೂಪ್ ನಲ್ಲಿ ಪರಿಚಯವಾದ ಅಪ್ರಾಪ್ತೆ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಸುಳ್ಯ ತಾಲೂಕು ಉಬರಡ್ಕ ಮಿತ್ತೂರು ನಿವಾಸಿ ತೀರ್ಥಪ್ರಸಾದ್ ಆರೋಪಿ. ವಾಟ್ಸಾಪ್ ಗ್ರೂಪ್ ನಲ್ಲಿ...

ದೇಶದಲ್ಲಿ ಪಿಎಫ್ಐ ಮೇಲೆ ನಿಷೇಧ ಹೇರಿದ ಕೇಂದ್ರ ಸರ್ಕಾರ

newsics.com ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆ ಮೇಲೆ ನಿಷೇಧ ಹೇರಿದೆ. ಐದು ವರ್ಷಕ್ಕೆ ನಿಷೇಧ ಹೇರಲಾಗಿದೆ. ಕೇಂದ್ರ ಗೃಹ ಸಚಿವಾಲಯ ಈ ಸಂಬಂಧ ಅಧಿಸೂಚನೆ ಹೊರಡಿಸಿದೆ. ಪಿಎಫ್ಐ ಮತ್ತು ಅದರ ಎಲ್ಲ...
- Advertisement -
error: Content is protected !!