Sunday, December 5, 2021

ವಲಸೆ ಕಾರ್ಮಿಕರ ಮನೆ ಬಾಗಿಲಿಗೆ ಪಡಿತರ: ಪೊಲೀಸರ ಶ್ಲಾಘನೀಯ ಕಾರ್ಯ

Follow Us

ಮೆಹಬೂಬ್ ನಗರ:  ಲಾಕ್ ಡೌನ್ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರ ಸಾಮೂಹಿಕ ವಲಸೆ ಸಾಮಾನ್ಯ ದೃಶ್ಯವಾಗಿದೆ. ಈ ಮಧ್ಯೆ ತೆಲಂಗಾಣದ ಮೆಹಬೂಬ್ ನಗರ ಪೊಲೀಸರು ಶ್ಲಾಘನೀಯ ಕೆಲಸ ಮಾಡಿದ್ದಾರೆ. ಮೆಹಬೂಬ್ ನಗರ ಜಿಲ್ಲೆಯ ವಲಸೆ ಕಾರ್ಮಿಕರ ಮನೆ  ಬಾಗಿಲಿಗೆ ಪಡಿತರ ಪೂರೈಸುತ್ತಿದ್ದಾರೆ. ದಾನಿಗಳ ನೆರವನ್ನು ಇದಕ್ಕೆ ಪಡೆಯಲಾಗಿದೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ಅಧಿಕಾರಿ ವಲಸೆ ಕಾರ್ಮಿಕರ  ಹಿತಾಸಕ್ತಿ ಕಾಪಾಡಬೇಕು ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಜಿಲ್ಲಾ ಪೊಲೀಸ್ ಅಧಿಕಾರಿ ರೇಮಾ ರಾಜೇಶ್ವರಿ ನೇತೃತ್ವದ ಪೊಲೀಸ್ ಅಧಿಕಾರಿಗಳ ಕಾರ್ಯ ವೈಖರಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!