ನವದೆಹಲಿ: ವಲಸೆ ಕಾರ್ಮಿಕರ ಬವಣೆ ಕುರಿತಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ದೇಶದಲ್ಲಿ ಲಾಕ್ ಡೌನ್ ಘೋಷಣೆಯಾದ ಬಳಿಕ ಲಕ್ಷಾಂತರ ವಲಸೆ ಕಾರ್ಮಿಕರು ತಮ್ಮ ಸ್ವಂತ ಊರಿಗೆ ಹಿಂತಿರುಗಿದ್ದಾರೆ. ಆರಂಭದ ದಿನಗಳಲ್ಲಿ ಇದು ಗೊಂದಲದ ಗೂಡಾಗಿತ್ತು. ಯಾವುದೇ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ವಲಸೆ ಕಾರ್ಮಿಕರು ನಡೆದುಕೊಂಡು ತಮ್ಮ ಊರಿಗೆ ತೆರಳಿದ್ದರು. ಸುಡು ಬಿಸಿಲಿನಲ್ಲಿ ಲಕ್ಷಾಂತರ ಕಾರ್ಮಿಕರ ನಡಿಗೆ ದೇಶದಲ್ಲಿ ರಾಜಕೀಯ ಸಂಚಲನವನ್ನು ಸೃಷ್ಚಿಸಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿತ್ತು. ವಲಸೆ ಕಾರ್ಮಿಕರಿಗಾಗಿ ಶ್ರಮಿಕ್ ರೈಲು ಸೇರಿದಂತೆ ಹಲವು ವ್ಯವಸ್ಥೆ ಕಲ್ಪಿಸಲಾಗಿದೆ ಎಂಬುದು ಕೇಂದ್ರ ಸರ್ಕಾರದ ವಾದವಾಗಿದೆ. ದೇಶದಲ್ಲಿ ಲಾಕ್ ಡೌನ್ ಘೋಷಣೆಯಾದ ಬಳಿಕ ಊರಿಗೆ ತೆರಳುತ್ತಿದ್ದ 60ಕ್ಕೂ ಹೆಚ್ಚು ಕಾರ್ಮಿಕರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಪ್ರಕರಣದಲ್ಲಿ ತನ್ನನ್ನು ಕೂ಼ಡ ಅರ್ಜಿದಾರನನ್ನಾಗಿ ಪರಿಗಣಿಸುವಂತೆ ಕಾಂಗ್ರೆಸ್ ಮನವಿ ಮಾಡಿದೆ
ಮತ್ತಷ್ಟು ಸುದ್ದಿಗಳು
ಆಮ್ಲಜನಕ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು
newsics.com
ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ.
ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು.
ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...
ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು
newsics.com
ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ.
ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ ಮಾಹಿತಿ ಹಂಚಿಕೊಂಡಿರುವ ರಿಜಿಜು,...
ಕೊರೋನಾ ಸೋಂಕಿತರ ಚಿಕಿತ್ಸೆಗೆ ಬಳಸುವ ರೆಮ್ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ
newsics.com
ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ.
ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
ಪ್ರಧಾನಿ ಮೋದಿ ಮನವಿ: ಕುಂಭಮೇಳ ಅಂತ್ಯ
newsics.com
ಹರಿದ್ವಾರ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಹರಿದ್ವಾರದ ಕುಂಭಮೇಳವನ್ನು ಮೊಟಕುಗೊಳಿಸಲಾಗಿದೆ. ಈ ಕುರಿತು ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಅವರು ಶನಿವಾರ (ಏ.17) ಸಂಜೆ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕುಂಭಮೇಳ...
ಕೊರೋನಾಕ್ಕೆ ದೇಶದಲ್ಲಿ 747 ವೈದ್ಯರ ಬಲಿ
newsics.com
ನವದೆಹಲಿ: ಮಾರಕ ಕೊರೋನಾ ದೇಶದಲ್ಲಿ 747 ವೈದ್ಯರ ಪ್ರಾಣ ಅಪಹರಿಸಿದೆ. ಕರ್ತವ್ಯ ನಿರ್ವಹಣೆ ವೇಳೆ ಈ ವೈದ್ಯರು ತಮ್ಮ ಪ್ರಾಣ ಅರ್ಪಿಸಿದ್ದಾರೆ.
ಅತೀ ಹೆಚ್ಚು ವೈದ್ಯರು ಕೊರೋನಾದಿಂದ ತಮಿಳುನಾಡಿನಲ್ಲಿ ಮೃತಪಟ್ಟಿದ್ದಾರೆ. 89 ವೈದ್ಯರು ತಮಿಳುನಾಡಿನಲ್ಲಿ...
ಕಳ್ಳರ ಕೈಯಿಂದ ಮೊಬೈಲ್ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವತಿ
newsics.com
ಅಮೃತಸರ: ಕಳ್ಳರ ಕೈಯಿಂದ ಮೊಬೈಲ್ ರಕ್ಷಿಸಲು ಹೋಗಿ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡ ಘಟನೆ ಅಮೃತಸರದಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ರಜನಿ ಎಂದು ಗುರುತಿಸಲಾಗಿದೆ. ಆಕೆಗೆ ಕೇವಲ 21 ವರ್ಷ ಪ್ರಾಯವಾಗಿತ್ತು.
ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ...
ರೈಲು ನಿಲ್ದಾಣಗಳಲ್ಲಿ ಮಾಸ್ಕ್ ಧರಿಸದಿದ್ದರೆ 500 ರೂ. ದಂಡ
newsics.com
ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ರೈಲಿನಲ್ಲಿ ಹಾಗೂ ರೈಲು ನಿಲ್ದಾಣಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಉಲ್ಲಂಘಿಸಿದರೆ 500 ರೂಪಾಯಿ ದಂಡ ಪಾವತಿಸಬೇಕಾಗಿದೆ.
ದೇಶದಲ್ಲಿ ಸತತ ಎರಡನೆ ದಿನ ಎರಡು...
ಕೊರೋನಾಕ್ಕೆ 15 ದಿನಗಳ ಹೆಣ್ಣು ಮಗು ಬಲಿ
newsics.com
ಸೂರತ್: ಮಾರಕ ಕೊರೋನಾ ಜನರ ಬದುಕನ್ನು ಸರ್ವನಾಶ ಮಾಡುತ್ತಿದೆ. ಸೂರತ್ ನಲ್ಲಿ ಕೊರೋನಾ ನವಜಾತ ಶಿಶುವಿನ ಪ್ರಾಣ ಅಪಹರಿಸಿದೆ. 15 ದಿನಗಳ ಹಿಂದೆ ಜನಿಸಿದ್ದ ಹೆಣ್ಣು ಮಗು ಕೊರೋನಾದಿಂದ ಮೃತಪಟ್ಟಿದೆ.
ಮಗು ಜನಿಸಿದ ಕೂಡಲೇ...
Latest News
ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ
newsics.com
ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ.
ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...
Home
ಆಮ್ಲಜನಕ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು
NEWSICS -
newsics.com
ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ.
ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು.
ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...
ಪ್ರಮುಖ
ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ
NEWSICS -
newsics.com
ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ.
ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...