Monday, April 12, 2021

ವಲಸೆ ಕಾರ್ಮಿಕರ ಬವಣೆ: ಇಂದು ಸುಪ್ರೀಂ ಕೋರ್ಟ್ ತೀರ್ಪು

ನವದೆಹಲಿ: ಲಾಕ್ ಡೌನ್ ವೇಳೆ ದೇಶದಲ್ಲಿ ವಲಸೆ ಕಾರ್ಮಿಕರು ಎದುರಿಸಿದ ಪರಿಸ್ಥಿತಿ ಹಾಗೂ ಅವರ ಸಮಸ್ಯೆಗಳ ಕುರಿತು ಸ್ವಯಂ ಪ್ರೇರಿತವಾಗಿ  ದೂರು ದಾಖಲಿಸಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಲಿದೆ. ಕೇವಲ ನಾಲ್ಕು ಗಂಟೆ ಸಮಯ ನೀಡಿ ದೇಶದಲ್ಲಿ ಲಾಕ್ ಡೌನ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಸಾರಿಗೆ ವ್ಯವಸ್ಥೆ ಸ್ಥಗಿತವಾಯಿತು. ಇದರಿಂದ  ಲಕ್ಷಾಂತರ ವಲಸೆ ಕಾರ್ಮಿಕರು ಕಾಲ್ನಡಿಗೆಯಲ್ಲಿ ತಮ್ಮ ಊರಿಗೆ ತೆರಳಿದರು. ದಾರಿ ಮಧ್ಯೆ ವಾಹನ ಅಪಘಾತದಿಂದಲೂ 50ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದರು. ಮಹಾರಾಷ್ಟ್ರದಲ್ಲಿ ರೈಲು ಹಳಿ  ಮೇಲೆ ನಡೆದುಕೊಂಡು ಹೋಗುತ್ತಿದ್ದ ಕಾರ್ಮಿಕರ ಮೇಲೆ ರೈಲು ಹರಿದ ಪರಿಣಾಮ 17 ಮಂದಿ ಮೃತಪಟ್ಟಿದ್ದರು. ಇದನ್ನೆಲ್ಲ ಪರಿಗಣಿಸಿ ಸುಪ್ರೀಂ ಕೋರ್ಟ್ ಸ್ವಯಂ  ಪ್ರೇರಿತವಾಗಿ ಪ್ರಕರಣ ದಾಖಲಿಸಿತ್ತು. ಅಲ್ಲದೆ ಕೇಂದ್ರ ಸರ್ಕಾರಕ್ಕೂ ನೋಟಿಸ್ ಜಾರಿ ಮಾಡಿತ್ತು. ವಲಸೆ ಕಾರ್ಮಿಕರಿಗೆ ಉಚಿತ ಊಟ ಸೇರಿದಂತೆ ಹಲವು ಸೌಲಭ್ಯ ನೀಡಿರುವುದಾಗಿ ಕೇಂದ್ರ ಸರ್ಕಾರ ಪ್ರಮಾಣ ಪತ್ರ ಸಲ್ಲಿಸಿದೆ

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!