Monday, April 12, 2021

ಸೇನೆ ಕಾರ್ಯಾಚರಣೆ; ಹಿಜ್ಬುಲ್ ಉಗ್ರನ ಹತ್ಯೆ, ಓರ್ವ ಯೋಧ ಹುತಾತ್ಮ

ಜಮ್ಮು: ಭಾರತೀಯ ಸೇನೆ ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಎನ್’ಕೌಂಟರ್ ನಡೆಸಿದ್ದು, ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಓರ್ವ ಉಗ್ರನನ್ನು ಹತ್ಯೆಗೈದಿದೆ. ಕಾರ್ಯಾಚರಣೆ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆ.
ಉಗ್ರರು ಗುಂಡ್ನಾ ದೋಡಾ ಎಂಬ ಪ್ರದೇಶದಲ್ಲಿ ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ತಿಳಿದು ಸೇನಾಪಡೆಗಳು ಕಾರ್ಯಾಚರಣೆಗೆ ಮುಂದಾಗಿದ್ದು, ಈ ವೇಳೆ ಉಗ್ರರು ಭದ್ರತಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.
ಇನ್ನೂ ಇಬ್ಬರು ಉಗ್ರರು ಅಡಗಿ ಕುಳಿತಿರುವ ಅನುಮಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಾಚರಣೆ ವೇಳೆ ಮತ್ತೋರ್ವ ಉಗ್ರ ಗಾಯಗೊಂಡಿದ್ದಾನೆಂದು ಹೇಳಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!