Wednesday, November 30, 2022

ಮಿಲ್ಖಾ ಸಿಂಗ್ ಸ್ಮರಣೆ: ಕಪ್ಪು‌ ಪಟ್ಟಿ ತೊಟ್ಟ ಭಾರತ ತಂಡ

Follow Us

newsics.com

ಸೌತಾಂಪ್ಟನ್‌: ಕೊರೋನಾ ಸೋಂಕಿನಿಂದ ಕೊನೆಯುಸಿರೆಳೆದ ಅಥ್ಲೀಟ್‌ ದಿಗ್ಗಜ ಮಿಲ್ಖಾ ಸಿಂಗ್ ಅವರ ಸ್ಮರಣಾರ್ಥ ಭಾರತ ಕ್ರಿಕೆಟ್ ತಂಡದ ಆಟಗಾರರು ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಫೈನಲ್‌ನಲ್ಲಿ ತೋಳಿಗೆ ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದರು.

‘ಫ್ಲೈಯಿಂಗ್ ಸಿಖ್‌‘ ಎಂದೇ ಖ್ಯಾತರಾಗಿದ್ದ ಮಿಲ್ಖಾ ಸಿಂಗ್‌ (91) ಶುಕ್ರವಾರ ಅಸುನೀಗಿದ್ದರು. ನ್ಯೂಜಿಲೆಂಡ್ ಎದುರು ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಶನಿವಾರ ಕಪ್ಪುಪಟ್ಟಿ ಧರಿಸಿ ಆಡುವ ಮೂಲಕ ಭಾರತ ತಂಡದ ಆಟಗಾರರು ಅವರಿಗೆ ಗೌರವ ಸಲ್ಲಿಸಿದರು.

ಒಲಿಂಪಿಯನ್‌ ಕ್ರೀಡಾಪಟುವೊಬ್ಬರಿಗೆ ಭಾರತ ಕ್ರಿಕೆಟ್ ತಂಡ ಕಪ್ಪುಪಟ್ಟಿ ಧರಿಸಿ ಗೌರವ ಸೂಚಿಸಿರುವುದು ಅಪರೂಪದ ಸಂದರ್ಭ. ಮಿಲ್ಖಾ ಸಿಂಗ್‌ಜೀ ಅವರ ಸ್ಮರಣೆಗಾಗಿ ಭಾರತ ಕ್ರಿಕೆಟ್ ತಂಡದ ಆಟಗಾರರು ಕಪ್ಪುಪಟ್ಟಿ ಧರಿಸಿದ್ದಾರೆ ಎಂದು ಬಿಸಿಸಿಐ ಮಾಧ್ಯಮ ವಿಭಾಗ ಪೋಸ್ಟ್ ಮಾಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...

ಕೊರೋನಾ ಬಳಿಕ ಕೇರಳದಲ್ಲಿ ಇದೀಗ ದಡಾರ ಭೀತಿ

newsics.com ತಿರುವನಂತಪುರಂ:  ಕೇರಳ ಮತ್ತು ಮಹಾರಾಷ್ಟ್ರದಲ್ಲಿ ದಡಾರ ರೋಗ ವ್ಯಾಪಕವಾಗಿ ಹರಡುತ್ತಿದೆ. ಚಿಕ್ಕಮಕ್ಕಳು ಹೆಚ್ಚಾಗಿ ಇದರ ಸೋಂಕಿಗೆ ತುತ್ತಾಗುತ್ತಿದ್ದಾರೆ. ಕೊರೋನಾದ ಬಳಿಕ ಕೇರಳದಲ್ಲಿ ಇದೀಗ ದಡಾರ ಹಾವಳಿ ಹೆಚ್ಚಾಗಿದೆ. ಕೇರಳದ  ಮಲಪ್ಪುರಂ ಜಿಲ್ಲೆಯಲ್ಲಿ  130 ದಡಾರ...
- Advertisement -
error: Content is protected !!