ಲಕ್ನೋ: ಉತ್ತರಪ್ರದೇಶದ ಶಹಾಜಾನ್ ಪುರದಲ್ಲಿ ದುಷ್ಕರ್ಮಿಗಳು ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಮಂದಿ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ದುಷ್ಕರ್ಮಿಗಳ ದಾಳಿಯಿಂದ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ.
ಇದೀಗ ಘಟನೆಯ ವೀಡಿಯೊ ದೃಶ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಎಲ್ಲ ದುಷ್ಕರ್ಮಿಗಳನ್ನು ಬಂಧಿಸುವುದಾಗಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ತಿಳಿಸಿದ್ದಾರೆ.