newsics.com
ಇಂಫಾಲ್: ಇಬ್ಬರು ವಿದ್ಯಾರ್ಥಿಗಳನ್ನು ಶಂಕಿತ ಶಸ್ತ್ರಧಾರಿಗಳು ಬರ್ಬರವಾಗಿ ಹತ್ಯೆ ಮಾಡಿದ ನಂತರ ರಾಜ್ಯದಲ್ಲಿ ಹೊಸ ಪ್ರತಿಭಟನೆ ಭುಗಿಲೆದ್ದಿದೆ. ಇಬ್ಬರು ವಿದ್ಯಾರ್ಥಿಗಳ ಶವದ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಇಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಹೀಗಾಗಿ ಮಣಿಪುರದಲ್ಲಿ 5 ದಿನಗಳ ಕಾಲ ಮೊಬೈಲ್ ಇಂಟರ್ನೆಟ್ ಸೇವೆ ನಿಷೇಧ ಮಾಡಲಾಗುತ್ತಿದೆ.
ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಿಗೆ ನಾಳೆ (ಸೆಪ್ಟೆಂಬರ್ 27)ಯಿಂದ ಸೆಪ್ಟೆಂಬರ್ 29(ಶುಕ್ರವಾರ) ವರೆಗೆ ರಜೆ ಘೋಷಿಸಲಾಗಿದೆ.
PHOTO | "All State Government/State Government Aided/Private Unaided Schools will be closed on 27.09.2023 (Wednesday) and 29.09.2023 (Friday)," states a notification issued by the Directorate of Education – Schools, Manipur. pic.twitter.com/0r3KEB3L94
— Press Trust of India (@PTI_News) September 26, 2023
ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ದೃಷ್ಟಿಯಿಂದ ಮತ್ತು ತಪ್ಪು ಮಾಹಿತಿ, ಸುಳ್ಳು ವದಂತಿಗಳು ಮತ್ತು ಇತರ ಹಿಂಸಾತ್ಮಕ ಚಟುವಟಿಕೆಗಳ ಹರಡುವಿಕೆಯನ್ನು ತಡೆಯುವ ಪ್ರಯತ್ನದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಡಳಿತ ಅಧಿಕಾರಿಗಳು ತಿಳಿಸಿದ್ದಾರೆ.