Tuesday, April 13, 2021

ಮನ್ ಕಿ ಬಾತ್’ಗೆ ಹೊಸ ಆಲೋಚನೆ, ವಿಷಯ ನೀಡಲು ಮೋದಿ ಮನವಿ

ನವದೆಹಲಿ: ಮನ್ ಕಿ ಬಾತ್ ನಲ್ಲಿ ಮಾತನಾಡಲು ಹೊಸ ಆಲೋಚನೆ, ವಿಷಯ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ದೇಶವಾಸಿಗಳಿಗೆ ಮನವಿ ಮಾಡಿದ್ದಾರೆ.
‘ಜೂನ್ 28ಕ್ಕೆ ಮನ್ ಕಿ ಬಾತ್ ಪ್ರಸಾರವಾಗಲಿದೆ. ಎರಡು ವಾರ ಬಾಕಿ ಇರುವಾಗಲೇ ನಿಮ್ಮ ಆಲೋಚನೆ, ವಿಷಯಗಳನ್ನು ನನ್ನ ಜತೆ ಹಂಚಿಕೊಳ್ಳಿ. ಇದರಿಂದ ನನಗೆ ಮತ್ತಷ್ಟು ಹೆಚ್ಚು ವಿಷಯಗಳ ಬಗ್ಗೆ ಮಾತನಾಡಲು ಕಮೆಂಟ್, ಫೋನ್ ಕಾಲ್ ಗಳನ್ನು ಸ್ವೀಕರಿಸಲು ಸಾಧ್ಯವಾಗುತ್ತದೆ. ಕೋವಿಡ್-19 ಜತೆಗೆ ಇನ್ನೂ ಹಲವು ವಿಷಯಗಳು ನಿಮ್ಮ ಬಳಿ ಇರಬಹುದು’ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. ಜನರು ಸಲಹೆ ನೀಡಲು ರೆಕಾರ್ಡ್ ಮಾಡಿರುವ ಸಂದೇಶಗಳನ್ನು Dial 1800-11-7800, ಲಿಖಿತ ಸಂದೇಶಗಳನ್ನು NaMo App., MyGov ಮೂಲಕ ಕಳುಹಿಸಲು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!