ಪುಣೆ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಖಜಾಂಚಿ ಸ್ವಾಮಿ ಗೋವಿಂದ್ ದೇವ್ ಗಿರಿ ಅವರು ಬುಧವಾರ ಈ ಮಾಹಿತಿ ನೀಡಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸ್ವಾಮಿ ಗೋವಿಂದ್ ದೇವ್ ಗಿರಿ ಅವರು, ಈ ಕಾರ್ಯಕ್ರಮದಲ್ಲಿ 200ಕ್ಕೂ ಹೆಚ್ಚು ಜನರಿಗೆ ಅವಕಾಶ ಇರುವುದಿಲ್ಲ. ಮೋದಿ ಅವರು ಆಗಸ್ಟ್ 5ರಂದು ಬೆಳಗ್ಗೆ ಹನುಮಾನ್ ಗರ್ಹಿ, ರಾಮ್ ಲಲ್ಲಾ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. ಬಳಿಕ ಮರ ನೆಡುತ್ತಾರೆ ಮತ್ತು ನಂತರ ರಾಮ ಮಂದಿರ ನಿರ್ಮಾಣದ ‘ಭೂಮಿ ಪೂಜೆ’ ನೆರವೇರಿಸಲಿದ್ದಾರೆ ಎಂದು ಅವರು ಹೇಳಿದರು. ದೇವಾಲಯ ಪೂರ್ಣಗೊಳಿಸಲು ಸುಮಾರು ಮೂರರಿಂದ ಮೂರುವರೆ ವರ್ಷ ಬೇಕಾಗಬಹುದೆಂದು ಅಂದಾಜಿಸಲಾಗಿದೆ.
ರಾಮಮಂದಿರ ನಿರ್ಮಾಣಕ್ಕೆ ಆಗಸ್ಟ್ 5ರಂದು ಮೋದಿ ಶಿಲಾನ್ಯಾಸ
Follow Us