ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಬಿಜೆಪಿ ಬೃಹತ್ ಸಭೆಯನ್ನು ಉದ್ದೇಶಿಸಿ ಇಂದು ಮಾತನಾಡಲಿದ್ದಾರೆ. ದೇಶದ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾನೂನು ವಿರೋಧಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದಿದೆ. ಇದಲ್ಲದೆ ಪಾಕ್ ನೆಲೆ ಹೊಂದಿರುವ ಭಯೋತ್ಪಾದಕ ಸಂಘಟನೆಗಳು ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಿವೆ ಎಂಬ ಗುಪ್ತಚರ ವರದಿಯೂ ಕೈ ಸೇರಿದ್ದು, ಗರಿಷ್ಟ ಮುನ್ನೆಚ್ಚರಿಕೆ ವಹಿಸಲಾಗಿದೆ. ಪ್ರಧಾನಿ ಪೌರತ್ವ ತಿದ್ದುಪಡಿ ಕುರಿತು ಕೇಂದ್ರ ಸರ್ಕಾರದ ನಿಲುವನ್ನು ಮತ್ತೊಮ್ಮೆ ಪುನರುಚ್ಚರಿಸುವ ಸಾಧ್ಯತೆಗಳಿವೆ.