newsics.com
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು 2015 ರಿಂದ 58 ದೇಶಗಳಿಗೆ ಭೇಟಿ ನೀಡಿದ್ದಾರೆ.
ಮೋದಿಯವರ ಈ ವಿದೇಶ ಪ್ರವಾಸಗಳಿಗೆ 517.82 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ವಿದೇಶಾಂಗ ಸಚಿವ ವಿ ಮುರಳೀಧರನ್ ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ಕೇಳಲಾದ ಈ ಪ್ರಶ್ನೆಗೆ ಮುರಳೀಧರನ್ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಅನೇಕ ದೇಶಗಳ ಪ್ರವಾಸ ಕೈಗೊಂಡಿದ್ದಾರೆ. ಕೋವಿಡ್-19ಗೂ ಮುನ್ನ ಅನೇಕ ರಾಷ್ಟ್ರಗಳಿಗೆ ಭೇಟಿ ನೀಡಿ ದ್ವಿಪಕ್ಷೀಯ ಒಪ್ಪಂದಗಳಿಗೆ ಸಾಕ್ಷಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಐದು ವರ್ಷದಲ್ಲಿ 58 ದೇಶಗಳಿಗೆ ಮೋದಿ ಪ್ರವಾಸ!
Follow Us