Tuesday, April 13, 2021

ಮೆಡಿಕಲ್ ಕಾಲೇಜಿನಿಂದ ಬ್ಲಡ್ ಸ್ಯಾಂಪಲ್ ಎಗರಿಸಿ ಮಂಗಗಳ ಪಲಾಯನ

ಮೀರತ್: ಮಂಗಗಳ ಗುಂಪೊಂದು ಮೀರತ್ ನ ಮೆಡಿಕಲ್ ಕಾಲೇಜು ಆವರಣದಲ್ಲಿ ರೋಗಿಗಳ ಬ್ಲಡ್  ಸ್ಯಾಂಪಲ್ ಗಳನ್ನು ಎಗರಿಸಿ ಪರಾರಿಯಾಗಿದೆ.ಕೊರೋನಾ ಪರೀಕ್ಷೆಗೆ ಸಂಬಂಧಿಸಿದ ಗಂಟಲು ದ್ರವ ಕೂಡ ಇದರಲ್ಲಿ ಸೇರಿತ್ತು ಎಂದು ಈ ಹಿಂದೆ ವರದಿಯಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಮೀರತ್ ಮೆಡಿಕಲ್ ಕಾಲೇಜು ಪ್ರಿನ್ಸಿಪಾಲ್  ಎಸ್ . ಕೆ . ಗಾರ್ಗ್. ಸಾಮಾನ್ಯ ರೋಗಿಗಳ ಬ್ಲಡ್  ಸ್ಯಾಂಪಲ್ ಗಳನ್ನು ಮಂಗಗಳು ಎತ್ತಿಕೊಂಡು ಹೋಗಿವೆ ಎಂದು ಹೇಳಿದ್ದಾರೆ. ಮಂಗಗಳ ಈ ಕೃತ್ಯದಿಂದ ಇಡೀ ಪರಿಸರದಲ್ಲಿ ಆತಂಕ ಸೃಷ್ಟಿಯಾಗಿತ್ತು. ಕೊರೋನಾ ಎಲ್ಲ ಕಡೆ ಇದರಿಂದ ಹರಡಲಿದೆ ಎಂದು ಜನರು ಭಯಭೀತರಾಗಿದ್ದರು. ಮೆಡಿಕಲ್ ಕಾಲೇಜು ಆವರಣದಲ್ಲಿ ನೂರಕ್ಕೂ ಹೆಚ್ಚು ಮಂಗಗಳಿದ್ದು, ರೋಗಿಗಳ ಬಳಿ ಇರುವ ಆಹಾರಕ್ಕಾಗಿ ಅವರ ಮೇಲೆ ದಾಳಿ ನಡೆಸುವುದು ಇಲ್ಲಿ ಸಾಮಾನ್ಯವಾಗಿದೆ

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!