Saturday, April 17, 2021

ದೇಶಕ್ಕೆ ಮುಂಗಾರು ಮಳೆ ಆಗಮನ ಸ್ವಲ್ಪ ವಿಳಂಬ

ನವದೆಹಲಿ: ದೇಶದ ಕೋಟ್ಯಂತರ ಜನರು ಎದುರು ನೋಡುತ್ತಿರುವ ಮುಂಗಾರು ಮಳೆ ಸ್ವಲ್ಪ ತ಼ಡವಾಗಿ ದೇಶಕ್ಕೆ ಆಗಮಿಸಲಿದೆ. ಸಾಮಾನ್ಯವಾಗಿ ಜೂನ್ ಒಂದರಂದು ಮುಂಗಾರು ಮಳೆ ಕೇರಳ ಪ್ರವೇಶಿಸುತ್ತದೆ. ಈ ಬಾರಿ ಜೂನ್ 5 ರಂದು ಮುಂಗಾರು ಕೇರಳಕ್ಕೆ ಅಪ್ಪಳಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೇಶದ ಆರ್ಥಿಕ ದೃಷ್ಟಿಯಿಂದ ಮುಂಗಾರು ಮಳೆ ಅತ್ಯಂತ ನಿರ್ಣಾಯಕವಾಗಿದೆ. ಒಟ್ಟು ಜನಸಂಖ್ಯೆಯ ಶೇಕಡ 60ಕ್ಕೂ ಹೆಚ್ಚು ಮಂದಿ ಕೃಷಿಯನ್ನು ಅವಲಂಬಿಸಿಕೊಂಡಿದ್ದಾರೆ. ಕೃಷಿ ಆಧಾರಿತ ಉದ್ಯಮಗಳಿಗೂ ಮುಂಗಾರು ಮಳೆಯೇ ಶ್ರೀ ರಕ್ಷೆಯಾಗಿದೆ. ಈ ಬಾರಿ ವಾಡಿಕೆಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!