Tuesday, April 13, 2021

ಉತ್ತರಪ್ರದೇಶದ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಿಂದಿಯಲ್ಲೇ ಫೇಲ್!

ಲಕ್ನೋ: ಹಿಂದಿಯೇ ಹಾಸುಹೊಕ್ಕಾಗಿರುವ ಉತ್ತರಪ್ರದೇಶದಲ್ಲಿ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಿಂದಿಯಲ್ಲೇ ಅನುತ್ತೀರ್ಣರಾಗಿದ್ದಾರೆ!
ರಾಜ್ಯಮಟ್ಟದ ಪ್ರೌಢ ಹಾಗೂ ಮಾಧ್ಯಮಿಕ ಶಾಲೆಯ ಪರೀಕ್ಷೆಯಲ್ಲಿ ಸುಮಾರು 55 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮಾಧ್ಯಮಿಕ ಶಾಲೆ ಪರೀಕ್ಷೆಯಲ್ಲಿ ಸುಮಾರು 2 ಲಕ್ಷ 70 ಸಾವಿರ ಹಾಗೂ ಪ್ರೌಢಶಾಲೆಗಳಲ್ಲಿ 5 ಲಕ್ಷ ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ.
ಸುಮಾರು 2.39 ಲಕ್ಷ ವಿದ್ಯಾರ್ಥಿಗಳು ಹಿಂದಿ ಪರೀಕ್ಷೆಗೆ ಹಾಜರಾಗೇ ಇಲ್ಲ. ಹಿಂದಿ ಮಾತೃಭಾಷೆ ಹೊಂದಿರುವ ರಾಜ್ಯದಲ್ಲೇ ಇಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಶಿಕ್ಷಣ ತಜ್ಞರ ಆಕ್ರೋಶಕ್ಕೆ ಕಾರಣವಾಗಿದೆ. ಶಿಕ್ಷಕರು ಹಾಗೂ ಸರ್ಕಾರದ ನಿರ್ಲಕ್ಷ್ಯದಿಂದಲೇ ಈ ಫಲಿತಾಂಶ ಬಂದಿದೆ ಎಂದು ಶಿಕ್ಷಣ ತಜ್ಞರು ಆರೋಪಿಸಿದ್ದಾರೆ.
ಆದರೆ ಸರ್ಕಾರ ‘ಪಾಲಕರು ಅತಿಯಾಗಿ ಇಂಗ್ಲಿಷ್‌ನತ್ತ ಒಲವು ಹೊಂದುತ್ತಿದ್ದಾರೆ. ಮನೆಯಲ್ಲಿ ಹಿಂದಿಯನ್ನು ಮಾತನಾಡಲು ಬಿಡುತ್ತಿಲ್ಲ, ಹಿಂದಿಯತ್ತ ಅತ್ಯಂತ ನಿರ್ಲಕ್ಷ್ಯ ತೋರಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಹಿಂದಿಯತ್ತ ಒಲವು ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಸಾಕಷ್ಟು ವಿದ್ಯಾರ್ಥಿಗಳು ಹಿಂದಿ ಪರೀಕ್ಷೆಗೆ ಹಾಜರಾಗುತ್ತಿಲ್ಲ’ ಎಂದು ಹೇಳಿದೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...
- Advertisement -
error: Content is protected !!