Monday, September 27, 2021

ಅನಂತ್ ಕುಮಾರ್ ಹೆಗಡೆ ಸೇರಿ 17 ಸಂಸದರಿಗೆ ಕೊರೋನಾ

Follow Us

ನವದೆಹಲಿ: ಮುಂಗಾರು ಅಧಿವೇಶನ ಆರಂಭವಾದ ಹಿನ್ನೆಲೆಯಲ್ಲೇ ಸಂಸತ್ತಿಗೆ ಕೊರೋನಾ ಸೋಂಕಿನ ಭೀತಿ ಎದುರಾಗಿದ್ದು, ಕರ್ನಾಟಕದ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿದಂತೆ ಒಟ್ಟು 17 ಸಂಸದರಿಗೆ ಕೊರೋನಾ ಸೋಂಕು ತಗುಲಿದೆ.

ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ನಡೆದ ಕಡ್ಡಾಯ ಪರೀಕ್ಷೆಯಲ್ಲಿ ಈ ಆತಂಕಕಾರಿ ಸಂಗತಿ ಹೊರಬಿದ್ದಿದ್ದು, ಮೀನಾಕ್ಷಿ ಲೇಖಿ, ಸರ್ವೇಶ್ ಸಾಹಿಬ್ ಸಿಂಗ್ ಸೇರಿದಂತೆ ವಿವಿಧ ಪಕ್ಷಗಳ ಒಟ್ಟು 17 ಸಂಸದರಿಗೆ ಮಾರಕ ಕೊರೋನಾ ಸೋಂಕು ತಗುಲಿರೋದು ಧೃಡಪಟ್ಟಿದೆ.

ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಂಸತ್ತಿನ ಅಧಿವೇಶನಕ್ಕೆ 60 ವರ್ಷ ಮೇಲ್ಪಟ್ಟ ಅಂದಾಜು 200 ಸಂಸದರಿಗೆ ಹಾಜರಾತಿಯಿಂದ ವಿಶೇಷ ವಿನಾಯತಿ ನೀಡಲಾಗಿದೆ.
ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಸುರಕ್ಷತೆ ದೃಷ್ಟಿಯಿಂದ ಎಲ್ಲ ಸಂಸದರಿಗೂ ಕಡ್ಡಾಯ ಕೊರೋನಾ ಸೋಂಕು ಪರೀಕ್ಷೆ ಮಾಡಿಸಲಾಗಿತ್ತು. ಈ ವೇಳೆ 17 ಸಂಸದರಿಗೆ ಸೋಂಕು ದೃಢಪಟ್ಟಿದೆ

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!