Monday, November 29, 2021

ನಿರ್ಭಯಾ ಕೇಸ್, ಗಲ್ಲು ಶಿಕ್ಷೆ ರದ್ದು ಕೋರಿದ್ದ ಮುಖೇಶ್ ಅರ್ಜಿ ವಜಾ

Follow Us

ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ನಡೆದ ದಿನ ದೆಹಲಿಯಲ್ಲಿ ಇರಲಿಲ್ಲ. ಹೀಗಾಗಿ ಮರಣದಂಡನೆ ರದ್ದುಪಡಿಸಬೇಕು ಎಂದು ಮಂಗಳವಾರ ಅಪರಾಧಿಗಳಲ್ಲಿ ಒಬ್ಬನಾದ ಮುಖೇಶ್ ಮಾಡಿದ್ದ ಮನವಿಯನ್ನು ಸುದೀರ್ಘ ವಿಚಾರಣೆಯ ಬಳಿಕ ದೆಹಲಿ ಕೋರ್ಟ್ ವಜಾಗೊಳಿಸಿದೆ.
ಈ ಮೂಲಕ ನೇಣುಗಂಬದಿಂದ ತಪ್ಪಿಸಿಕೊಳ್ಳಲು ಅಪರಾಧಿಗಳು ಕೊನೆ ಕ್ಷಣದಲ್ಲಿ ನಡೆಸಿದ ಮತ್ತೊಂದು ಯತ್ನವೂ ವಿಫಲವಾಗಿದೆ.
ದೆಹಲಿ ಹೈಕೋರ್ಟ್ ನ ಈ ತೀರ್ಪಿನಿಂದ ನಾಲ್ವರು ಅಪರಾಧಿಗಳನ್ನು ನೇಣುಗೇರಿಸಲು ತಿಹಾರ್ ಜೈಲಿನ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ .
ಅಪರಾಧ ನಡೆದ ಒಂದು ದಿನದ ಬಳಿಕ, ತನ್ನನ್ನು ರಾಜಸ್ಥಾನದಲ್ಲಿ ಬಂಧಿಸಿ ದೆಹಲಿಗೆ ಗೆ ಕರೆತರಲಾಗಿತ್ತು. ಎಂದು ದೆಹಲಿ ಸೆಷನ್ಸ್ ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. ಅಲ್ಲದೆ ತನಗೆ ತಿಹಾರ್ ಜೈಲಿನಲ್ಲಿ ಚಿತ್ರಹಿಂಸೆ ನೀಡಲಾಗಿತ್ತು ಎಂದೂ ಮುಖೇಶ್ ಆರೋಪಿಸಿದ್ದ.

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!