ಮುಂಬೈ: ಮುಂಬೈ ಸಮೀಪದ ಭಿವಂಡಿಯಲ್ಲಿ ಸಂಭವಿಸಿದ ಕಟ್ಟಡ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 33ಕ್ಕೆ ಏರಿದೆ. ಭಿವಂಡಿಯಲ್ಲಿರುವ ಪಟೇಲ್ ಕಂಪೌಂಡ್ ನಲ್ಲಿದ್ದ ಮೂರು ಅಂತಸ್ತಿನ ಕುಟ್ಟಡ ಕುಸಿದು ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ನಸುಕಿನ ಜಾವ ಈ ದುರಂತ ಸಂಭವಿಸಿದಾಗ ಹೆಚ್ಚಿನವರು ಮನೆಯಲ್ಲಿ ಮಲಗಿದ್ದರು.
ಮೃತಪಟ್ಟವರಲ್ಲಿ ಹೆಚ್ಚಿನವರು ಮಕ್ಕಳಾಗಿದ್ದಾರೆ. ಕಟ್ಟಡ ಶಿಥಿಲಾವಸ್ಥೆಯಲ್ಲಿ ಇದ್ದ ಕಾರಣ ಕುಸಿದು ಬಿದ್ದಿದೆ ಎಂದು ಪ್ರಾಥಮಿಕ ವರದಿ ಸೂಚಿಸಿದೆ. ದುರಂತ ಕುರಿತು ಮಹಾರಾಷ್ಟ್ರ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಿದೆ