Tuesday, April 13, 2021

ನೂರು ವರ್ಷದ ಬಳಿಕ ಮೊದಲ ಬಾರಿ ಚಂಡಮಾರುತ ಎದುರಿಸುತ್ತಿರುವ ಮುಂಬೈ

ಮುಂಬೈ: ದೇಶದ ವಾಣಿಜ್ಯ ರಾಜಧಾನಿ ಮುಂಬೈ ನೂರು ವರ್ಷದ ಬಳಿಕ ಮೊದಲ ಬಾರಿಗೆ ಚಂಡಮಾರುತ ಎದುರಿಸುತ್ತಿದೆ. ಏಳು ದ್ವೀಪಗಳ ಸಮೂಹವಾಗಿರುವ ಮುಂಬೈ ಅರಬಿ ಸಮುದ್ರದ ತಟದಲ್ಲಿದ್ದು, ದೇಶದ ಆರ್ಥಿಕ ಚಟುವಟಿಕೆಯ ಕೇಂದ್ರ ಬಿಂದುವಾಗಿದೆ. ನಿಸರ್ಗ ಚಂಡ ಮಾರುತ ಎದುರಿಸಲು ಎಲ್ಲ ಮುನ್ನೆಚ್ಚರಿಕೆ ವಹಿಸಲಾಗಿದ್ದು, ತೀರ ಪ್ರದೇಶಗಳಲ್ಲಿ ಕಣ್ಗಾವಲು ಮುಂದುವರಿದಿದೆ. ಕರಾವಳಿ ತೀರ ರಕ್ಷಣಾ ಪಡೆ ಮೀನುಗಾರಿಕೆಯಲ್ಲಿ ತೊಡಗಿದ್ದ 107 ಮೀನುಗಾರರನ್ನು ರಕ್ಷಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ  33 ತಂಡಗಳನ್ನು ಮಹಾರಾಷ್ಟ್ರ ಮತ್ತು ಗುಜರಾತ್ ನಲ್ಲಿ ನಿಯೋಜಿಸಲಾಗಿದೆ. ಮಹಾರಾಷ್ಟ್ರದ ಆಲಿಭಾಗ್ ನಲ್ಲಿ ನಿಸರ್ಗ ಚಂಡಮಾರುತ ಭೂ ಸ್ಪರ್ಶ ಮಾಡಲಿದ್ದು, ಮಹಾರಾಷ್ಟ್ರ ಮತ್ತು ಗುಜರಾತ್ ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಸಾಗರದಲ್ಲಿ ದೈತ್ಯ ಅಲೆಗಳು ನಿರ್ಮಾಣವಾಗಲಿದ್ದು, ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!