newsics.com
ಅಬುದಾಬಿ: ಬಹುನಿರೀಕ್ಷಿತ ಐಪಿಎಲ್ ಸೀಸನ್ 13 ರ ಮೊದಲ ಟ್ವೆಂಟಿ 20 ಮ್ಯಾಚ್ ಆರಂಭವಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಹಣಾಹಣಿ ನಡೆದಿದೆ.
ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ಗೆ 163 ರನ್ ಸವಾಲಿನ ಟಾರ್ಗೆಟ್ ನೀಡಿದೆ. ಕ್ವಿಂಟನ್ ಡಿಕಾಕ್ ಹಾಗೂ ಸೌರಭ್ ತಿವಾರಿ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಮುಂಬೈ ನಿಗದಿತ 20 ಓವರ್ನಲ್ಲಿ 9 ವಿಕೆಟ್ ಕಳೆದುಕೊಂಡು 162 ರನ್ ಗಳಿಸಿದೆ. ಈ ಮೂಲಕ ಧೋನಿ ಪಡೆಗೆ ಗೆಲ್ಲಲು 163 ರನ್ಗಳ ಟಾರ್ಗೆಟ್ ನೀಡಿದೆ. ಟಾಸ್ ಗೆದ್ದ ಚೆನ್ನೈ ತಂಡದ ನಾಯಕ ಎಂ ಎಸ್ ಧೋನಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು.
ಧೋನಿ ಪಡೆಗೆ 163 ರನ್ ಟಾರ್ಗೆಟ್ ನೀಡಿದ ಮುಂಬೈ ಇಂಡಿಯನ್ಸ್
Follow Us