newsics.com
ದುಬೈ: ಮುಂಬೈ ಇಂಡಿಯನ್ಸ್ ತಂಡ ಐಪಿಎಲ್ನಲ್ಲಿ ಸತತ 2ನೇ ಮತ್ತು ಒಟ್ಟಾರೆ 5ನೇ ಬಾರಿಗೆ ಪ್ರಶಸ್ತಿ ಗೆದ್ದುಕೊಂಡಿತು.
ಲೀಗ್ ಇತಿಹಾಸದಲ್ಲಿಯೇ ಅತ್ಯಂತ ಯಶಸ್ವಿ ತಂಡ ಎಂಬ ಹಣೆಪಟ್ಟಿಗೆ ತಕ್ಕಂತೆ ನಿರ್ವಹಣೆ ತೋರಿದ ರೋಹಿತ್ ಶರ್ಮ ಬಳಗ ಐಪಿಎಲ್-13ರ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 5 ವಿಕೆಟ್ಗಳಿಂದ ಸೋಲಿಸಿತು. ಚೊಚ್ಚಲ ಪ್ರಶಸ್ತಿ ಕನಸಿನಲ್ಲಿದ್ದ ಶ್ರೇಯಸ್ ಅಯ್ಯರ್ ಬಳಗ ನಿರಾಸೆ ಅನುಭವಿಸಿತು.
ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ, ನಾಯಕ ಶ್ರೇಯಸ್ ಅಯ್ಯರ್ (65ರನ್, 50 ಎಸೆತ, 6 ಬೌಂಡರಿ, 2 ಸಿಕ್ಸರ್) ಹಾಗೂ ರಿಷಭ್ ಪಂತ್ (56 ರನ್, 38 ಎಸೆತ, 4 ಬೌಂಡರಿ, 2 ಸಿಕ್ಸರ್) ಜೋಡಿಯ ಸಮಯೋಚಿತ ಬ್ಯಾಟಿಂಗ್ನಿಂದ 7 ವಿಕೆಟ್ಗೆ 156 ರನ್ ಗಳಿಸಿತು. ಪ್ರತಿಯಾಗಿ ಮುಂಬೈ ಇಂಡಿಯನ್ಸ್, ನಾಯಕ ರೋಹಿತ್ ಶರ್ಮ (68ರನ್, 51 ಎಸೆತ, 5 ಬೌಂಡರಿ, 4 ಸಿಕ್ಸರ್) ಬಿರುಸಿನ ಬ್ಯಾಟಿಂಗ್ ನೆರವಿನಿಂದ 18.4 ಓವರ್ಗಳಲ್ಲಿ 5 ವಿಕೆಟ್ಗೆ 157 ರನ್ ಗಳಿಸಿ ಗೆಲುವು ಸಾಧಿಸಿತು.
ದಾವೂದ್ ಇಬ್ರಾಹಿಂನ ಆರು ಆಸ್ತಿ ಹರಾಜು
ಸರ್ಕಾರಿ ಕೆಲಸಕ್ಕೆ ಸೇರಿದ್ದಕ್ಕೆ ಯುವತಿಯ ಕಣ್ಣುಕಿತ್ತ ದುಷ್ಕರ್ಮಿಗಳು
ಉಗ್ರರ ಅಡಗುತಾಣದಲ್ಲಿದ್ದ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶ
ಡ್ರಗ್ಸ್ ದಂಧೆ ಬಯಲಿಗೆಳೆವ ಭಯ; ಟಿವಿ ಪತ್ರಕರ್ತನ ಕೊಲೆ
ರಸ್ತೆ ಅಪಘಾತ; ಸ್ಥಳದಲ್ಲೇ 7 ಜನ ಸಾವು, ನಾಲ್ವರಿಗೆ ಗಾಯ
ಬಾಲಕಿಯರನ್ನು ಒತ್ತೆಯಲ್ಲಿರಿಸಿ ಅತ್ಯಾಚಾರ: ನಾಲ್ಕು ಆರೋಪಿಗಳ ಬಂಧನ