Wednesday, July 6, 2022

ಮುರ್ಮು, ಭಾರತದ ನೂತನ ಸಿಎಜಿ; ಆ.9ರಂದು ಪ್ರಮಾಣವಚನ

Follow Us

ನವದೆಹಲಿ: ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗೌರ್ನರ್ ಹುದ್ದೆಗೆ ರಾಜೀನಾಮೆ ನೀಡಿದ್ದ ಗಿರೀಶ್ ಮುರ್ಮು ಅವರನ್ನು ಭಾರತದ ನೂತನ ಮಹಾಲೆಕ್ಕ ಪರಿಶೋಧಕ ಹಾಗೂ ಮಹಾಲೇಖಪಾಲ (ಸಿಎಜಿ) ಹುದ್ದೆಗೆ ನೇಮಕ ಮಾಡಲಾಗಿದೆ.
ಜಿ.ಸಿ ಮುರ್ಮು ಅವರು ಸಿಎಜಿ ಆಗಿ ಆ.9ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈಗಿನ ಆಡಿಟರ್ ಜನರಲ್ ರಾಜೀವ್ ಮೆಹ್ರಿಷಿ ಈ ವಾರ ನಿವೃತ್ತರಾಗಲಿದ್ದಾರೆ. ಸಿಎಜಿಯಾಗಿ ಅಧಿಕಾರ ಸ್ವೀಕರಿಸುವುದಕ್ಕಾಗಿಯೇ ಜಿ.ಸಿ ಮುರ್ಮು ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗೌರ್ನರ್ ಹುದ್ದೆಗೆ ರಾಜೀನಾಮೆ ನೀಡಿದ್ದರು. 1985ನೇ ಬ್ಯಾಚ್‌ನ ಗುಜರಾತ್‌ ಕೇಡರ್‌ ಐಎಎಸ್‌ ಅಧಿಕಾರಿಯಾಗಿರುವ ಜಿಸಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ ಮುಖ್ಯಮಂತ್ರಿ ಆಗಿದ್ದಾಗಿನಿಂದಲೂ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಮೋದಿ ಗುಜರಾತ್ ಸಿಎಂ ಆಗಿದ್ದಾಗ ಅವರಿಗೆ ಮುರ್ಮು ಪ್ರಧಾನ ಕಾರ್ಯದರ್ಶಿಯಾಗಿದ್ದರು.

ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮುರ್ಮು ರಾಜೀನಾಮೆ

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!