ನವದೆಹಲಿ: ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ರಾಜೀನಾಮೆ ನೀಡಿದ್ದಾರೆ.
ಗಿರೀಶ್ ಚಂದ್ರ ಮುರ್ಮು ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ರವಾನಿಸಿದ್ದಾರೆ. ಆದರೆ, ಇನ್ನೂ ರಾಮನಾಥ್ ಕೋವಿಂದ್ ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಅಂಗೀಕರಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ಮುಂದಿನ ವಾರದಲ್ಲಿ ಭಾರತದ ಕಂಪ್ಟ್ರೋಲರ್ ಮತ್ತು ಆಡಿಟರ್ ಜನರಲ್(ಸಿಎಜಿ) ರಾಜೀವ್ ಮೆಹರಿಶಿ ನಿವೃತ್ತಿಯಾಗುತ್ತಿದ್ದು, ಈ ಹುದ್ದೆಗೆ ಆಕಾಂಕ್ಷಿಯಾಗಿದ್ದರೆನ್ನಲಾದ ಮುರ್ಮು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಕಳೆದ ವರ್ಷ ಅಕ್ಟೋಬರ್ 25 ರಂದು
ನೂತನ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ಐಎಎಸ್ ಅಧಿಕಾರಿ ಗಿರೀಶ್ ಚಂದ್ರ ಮುರ್ಮು ನೇಮಕವಾಗಿದ್ದರು. 1985ರ ಬ್ಯಾಚ್ನ ಗುಜರಾತ್ ಕೇಡರ್ ಅಧಿಕಾರಿಯಾಗಿದ್ದ ಮುರ್ಮು ಕೇಂದ್ರ ಹಣಕಾಸು ಸಚಿವಾಲಯದಲ್ಲಿ ಎಕ್ಸ್ಪೆಂಡಿಚರ್ ಸೆಕ್ರೆಟರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮುರ್ಮು ರಾಜೀನಾಮೆ
Follow Us