Monday, October 3, 2022

ನನ್ನ ಜೀವ ಅಪಾಯದಲ್ಲಿದೆ ಎಂದಿರುವ ಅರ್ನಾಬ್ ಗೋ ಸ್ವಾಮಿ

Follow Us

Newsics.com

ಮುಂಬೈ: ಬಂಧನದಲ್ಲಿರುವ ರಿಪಬ್ಲಿಕ್ ಸುದ್ದಿ ವಾಹಿನಿಯ ಮುಖ್ಯ ಸಂಪಾದಕ ಅರ್ನಾಬ್ ಗೋ ಸ್ವಾಮಿ ತಮ್ಮ ಜೀವ ಅಪಾಯದಲ್ಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಅಲಿ ಭಾಗ್ ನಿಂದ ತಲೋಜಾ ಜೈಲಿಗೆ ಕರೆದೊಯ್ಯುತ್ತಿದ್ದ ವೇಳೆ ಅರ್ನಾಬ್ ಈ ಆತಂಕ ವ್ಯಕ್ತಪಡಿಸಿದ್ದಾರೆ.

ನನಗೆ ವಕೀಲರನ್ನು ಭೇಟಿ ಮಾಡಲು ಅವಕಾಶ ನೀಡುತ್ತಿಲ್ಲ, ನನ್ನ ಮೇಲೆ ಇಂದು ಕೂಡ ಹಲ್ಲೆ ನಡೆಸಲಾಗಿದೆ ಎಂದು ಅರ್ನಾಬ್ ಆರೋಪಿಸಿದ್ದಾರೆ.

ಅರ್ನಾಬ್ ಅವರನ್ನು ಇದೀಗ ನವಿ ಮುಂಬೈ ಸಮೀಪದ ತಲೋಜಾ ಜೈಲಿಗೆ ಶಿಫ್ಟ್ ಮಾಡಲಾಗಿದೆ. 77 ಎಕರೆ ಪ್ರದೇಶದಲ್ಲಿ ಇರುವ ತಲೋಜಾ ಜೈಲ್ಲಿನಲ್ಲಿ ಭೂಗತ ಪಾತಕಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಅಬು ಸಲೇಂ ಮತ್ತು ಅರುಣ್ ಗಾವ್ಳಿ  ಕೂಡ ಇಲ್ಲಿ ಸೆರೆವಾಸ  ಅನುಭವಿಸುತ್ತಿದ್ದಾರೆ.

ಮುಂಬೈ ಬಾಂಬ್ ಸ್ಪೋಟ ಸೇರಿದಂತೆ ಹಲವು ಪ್ರಮುಖ ಪ್ರಕರಣಗಳ ಆರೋಪಿಗಳು ಈ ಜೈಲಿನಲ್ಲಿದ್ದಾರೆ.

ಈ ಮಧ್ಯೆ ಅರ್ನಾಬ್ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಬಾಂಬೆ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಸೋಮವಾರ ನ್ಯಾಯಾಲಯ ತೀರ್ಪು ನೀಡುವ ಸಾಧ್ಯತೆಯಿದೆ.

ಅರ್ನಾಬ್ ಗೋ ಸ್ವಾಮಿಯನ್ನು ಜೈಲಿಗೆ ಕರೆದೊಯ್ಯುತ್ತಿರುವ ಅಧಿಕಾರಿಗಳು

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!