ನವದೆಹಲಿ: ವಿದ್ಯಾರ್ಥಿಗಳ ಪ್ರವೇಶ ಸಂಬಂಧ ಪ್ರತ್ಯೇಕ ಪರೀಕ್ಷೆ ನಡೆಸುವ ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆಯ ಕ್ರಮ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ಪೂರ್ಣಗೊಂಡಿದೆ. ಈ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ. ಸೆಪ್ಟೆಬರ್ 21 ಸೋಮವಾರ ತೀರ್ಪು ನೀಡುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
ದೇಶದ ಪ್ರತಿಷ್ಠಿತ ಕಾನೂನು ಕಾಲೇಜುಗಳಲ್ಲಿ ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ ಮೊದಲ ಸ್ಥಾನದಲ್ಲಿ ಗುರುತಿಸಿಕೊಂಡಿದೆ. ಇಲ್ಲಿ ಪ್ರವೇಶ ಪಡೆಯುವುದೇ ಲಕ್ಷಾಂತರ ವಿದ್ಯಾರ್ಥಿಗಳ ಕನಸಾಗಿರುತ್ತದೆ. ಇದೀಗ ಪ್ರತ್ಯೇಕ ಪ್ರವೇಶ ಪರೀಕ್ಷೆ ನಡೆಸುವ ಕಾನೂನು ಶಾಲೆಯ ನಿರ್ಧಾರವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲಾಗಿದೆ.