ನವದೆಹಲಿ: ದೆಹಲಿಯಲ್ಲಿರುವ ಗಾರ್ಗ್ ಮಹಿಳಾ ಕಾಲೇಜ್ ನಲ್ಲಿ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಅದು ಹೇಳಿದೆ. ಕ್ಯಾಂಪಸ್ ಹೊರಗಿನ ಕೆಲವು ವ್ಯಕ್ತಿಗಳು ಕಾಲೇಜಿಗೆ ಪ್ರವೇಶಿಸಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಸಂಬಂಧ ಸಿಸಿಟಿವಿ ಪರಿಶೀಲಿಸುವುದಾಗಿ ದೆಹಲಿ ಪೊಲೀಸರು ಹೇಳಿದ್ದಾರೆ.