Thursday, December 9, 2021

24 ಗಂಟೆಯಲ್ಲಿ ದೇಶಾದ್ಯಂತ ದಾಖಲೆ ಪ್ರಮಾಣದ ಸಾವು

Follow Us

ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದ ವಿವಿಧೆಡೆ ದಾಖಲೆ ಪ್ರಮಾಣದಲ್ಲಿ 62 ಮಂದಿಯನ್ನು ಬಲಿ ತೆಗೆದುಕೊಂಡಿದೆ. 2,000ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ಪತ್ತೆಯಾಗಿರುವುದು ಆತಂಕ್ಕೀಡುಮಾಡಿದೆ.
ಭಾರತದಲ್ಲಿ ಮೃತರ ಸಂಖ್ಯೆ1,000 ಸನಿಹಕ್ಕೆ ತಲುಪುತ್ತಿದೆ. ಮತ್ತೊಂದೆಡೆ ಸೋಂಕು ಪೀಡಿತರ ಸಂಖ್ಯೆಯೂ 30,000ಕ್ಕೆ ಹತ್ತಿರದಲ್ಲಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಪ್ರತಿದಿನ ದೇಶದಲ್ಲಿ ಸರಾಸರಿ 45 ಮಂದಿ ಸಾವಿಗೀಡಾಗುತ್ತಿದ್ದಾರೆ. ಸೋಂಕಿತರ ಹೆಚ್ಚಳವೂ ಸರಾಸರಿ 1,800ರ ಪ್ರಮಾಣದಲ್ಲಿದೆ. ಅಧಿಕೃತ ವರದಿ ಪ್ರಕಾರ, ಈವರೆಗೆ ದೇಶಾದ್ಯಂತ 934 ಜನರನ್ನು ಬಲಿ ಪಡೆದಿದ್ದು, ಸೋಂಕಿತರ ಸಂಖ್ಯೆ 29,436ಕ್ಕೇರಿದೆ.
ಈವರೆಗೆ ಮಹಾರಾಷ್ಟ್ರದಲ್ಲಿ ಒಟ್ಟೂ 369 ಸಾವುಗಳು ವರದಿಯಾಗಿವೆ. ನಂತರದ ಸ್ಥಾನಗಳಲ್ಲಿ ಗುಜರಾತ್ (162), ಮಧ್ಯಪ್ರದೇಶ (110),ದೆಹಲಿ (54),ರಾಜಸ್ತಾನ (46), ಆಂಧ್ರಪ್ರದೇಶ ಮತ್ತು ಉತ್ತರ ಪ್ರದೇಶ (ತಲಾ 31), ತೆಲಂಗಾಣ(26), ತಮಿಳುನಾಡು (24), ಪಶ್ಚಿಮ ಬಂಗಾಳ(20), ಕರ್ನಾಟಕ (19), ಹಾಗೂ ಪಂಜಾಬ್ (18) ರಾಜ್ಯಗಳಿವೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಆರು,ಕೇರಳದಲ್ಲಿ ನಾಲ್ಕು, ಜಾರ್ಖಂಡ್ ಮತ್ತು ಹರಿಯಾಣ ತಲಾ ಮೂರು, ಬಿಹಾರ ಎರಡು, ಮೇಘಾಲಯ, ಹಿಮಾಚಲ ಪ್ರದೇಶ, ಒಡಿಶಾ ಮತ್ತು ಅಸ್ಸಾಂ ರಾಜ್ಯಗಳಲ್ಲಿ ತಲಾ ಒಂದೊಂದು ಸಾವುಗಳು ವರದಿಯಾಗಿವೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!