newsics.com
ರೋಡ್ ರೇಜ್ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಇಂದು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪಟಿಯಾಲ ಕೇಂದ್ರ ಕಾರಾಗೃಹದಲ್ಲಿರುವ ಸಿಧುರನ್ನು ಪಟಿಯಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಧು ವೇಯ್ಟ್ ಅಲರ್ಜಿಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.
34 ವರ್ಷಗಳ ಹಿಂದೆ ಪಟಿಯಾಲಾದಲ್ಲಿ 65 ವರ್ಷದ ಗುರ್ನಾಮ್ ಸಿಂಗ್ ಮೇಲೆ ನವಜೋತ್ ಸಿಂಗ್ ಸಿಧು ಹಲ್ಲೆ ನಡೆಸಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಗುರ್ನಾಮ್ ಸಿಂಗ್ ಬಳಿಕ ಮೃತಪಟ್ಟಿದ್ದರು.