Wednesday, October 5, 2022

ಮುಂಬೈಯ ಐದು ಪ್ರದೇಶಗಳಲ್ಲಿ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ದಾಳಿ

Follow Us

Newsics.com

ಮುಂಬೈ: ಮಾದಕ ದ್ರವ್ಯ ಜಾಲದ ತನಿಖೆ ನಡೆಸುತ್ತಿರುವ ಎನ್ ಸಿ ಬಿ, ಮುಂಬೈ ಮಹಾನಗರದ ಐದು ಕಡೆ ದಾಳಿ ನಡೆಸಿದೆ. ಶೋಧ ಕಾರ್ಯ ಈಗಲೂ ಮುಂದುವರಿದಿದೆ.

ಶನಿವಾರ ರಾತ್ರಿ ಮಾದಕ ದ್ರವ್ಯ ಪೆಡ್ಲರ್ ನೊಬ್ಬನನ್ನು ಬಂಧಿಸಿರುವ ಎನ್ ಸಿ ಬಿ, ಇದರ ಮುಂದುವರಿದ ಭಾಗವಾಗಿ ಈ ದಾಳಿ ನಡೆಸಿದೆ.

ಮಲಾಡ್, ಅಂಧೇರಿ, ಲೋಖಂಡವಾಲಾ, ಕಾರ್ ಘರ್ ಮತ್ತು ಕೊರ್ಪ ಕೈನ್ ಪ್ರದೇಶದಲ್ಲಿ ಎನ್ ಸಿ ಬಿ ಶೋಧ ಕಾರ್ಯ ನಡೆಸುತ್ತಿದೆ. ದಾಳಿಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. ಒಂದು ವಾರದ ಹಿಂದೆ ಇದೇ ರೀತಿ ದಾಳಿ ನಡೆಸಿದ್ದ ಎನ್ ಸಿ ಬಿ, ಜನಪ್ರಿಯ ಹಿಂದಿ ಕಿರುತೆರೆ ನಟಿಯೊಬ್ಬರನ್ನು ಬಂಧಿಸಿತ್ತು.

ಮುಂಬೈ ಸೇರಿದಂತೆ ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ನಿಯಮಗಳು ಸಡಿಲಿಕೆಯಾಗಿದೆ. ಇದರ ಜತೆಗೆ ದೇಶದ ಇತರ ನಗರಗಳಲ್ಲಿ , ಪಬ್ ಮತ್ತು ಬಾರ್ ಗಳಲ್ಲಿ ಗ್ರಾಹಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದನ್ನು ಬಂಡವಾಳ ಮಾಡಿಕೊಂಡಿರುವ ಪೆಡ್ಲರ್ ಗಳು ಮಾದಕ ದ್ರವ್ಯ ಪೂರೈಕೆಗೆ ಸಂಚು ಹೂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಲೋಖಂಡವಾಲಾ ಪ್ರದೇಶದಲ್ಲಿ ಹಿಂದಿ ಚಿತ್ರ ರಂಗದ ತಾರೆಯರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಮುಂಬೈನ ಪ್ರತಿಷ್ಠಿತ ಏರಿಯಾಗಳಲ್ಲಿ ಒಂದಾಗಿದೆ.

ಭಾರತಕ್ಕೆನುಸುಳಲು ಉಗ್ರರ ಯತ್ನ: ಓರ್ವ ಭಯೋತ್ಪಾದಕ ಗುಂಡಿಗೆ ಬಲಿ

ಮತ್ತಷ್ಟು ಸುದ್ದಿಗಳು

vertical

Latest News

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು....

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...

ಭೀಕರ ಅಪಘಾತ- 10 ಮಂದಿ ಸಾವು, 7 ಮಂದಿಗೆ ಗಾಯ

newsics.com ವಡೋದರ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ....
- Advertisement -
error: Content is protected !!