Thursday, December 8, 2022

ನಟ ಅರ್ಜುನ್ ರಾಂಪಾಲ್ ನಿವಾಸದ ಮೇಲೆ ಎನ್ ಸಿ ಬಿ ದಾಳಿ

Follow Us

Newsics.com

ಮುಂಬೈ: ಮಾದಕ ದ್ರವ್ಯ ಜಾಲದ ತನಿಖೆ ನಡೆಸುತ್ತಿರುವ ಎನ್ ಸಿ ಬಿ, ನಟ ಅರ್ಜು ನ್ ರಾಂಪಾಲ್ ನಿವಾಸದ ಮೇಲೆ ದಾಳಿ ನಡೆಸಿದೆ. ಶೋಧ ಕಾರ್ಯ ಮುಂದುವರಿದಿದೆ. ನಿರ್ಮಾಪಕಕರೊಬ್ಬರ  ನಿವಾಸದ ಮೇಲೆ ದಾಳಿ ನಡೆಸಿದ ಬೆನ್ನಲ್ಲೆ ಈ ದಾಳಿ ನಡೆದಿದೆ.

ಇದೀಗ ಶೋಧ ಕಾರ್ಯ ಮುಂದುವರಿದಿದೆ. ಭಾನುವಾರ ಮುಂಬೈ ಮಹಾನಗರದ ಐದು ಪ್ರದೇಶಗಳಲ್ಲಿ ಎನ್ ಸಿ ಬಿ ದಾಳಿ ನಡೆಸಿತ್ತು.

ಭಾನುವಾರ ಹಿಂದಿ ಚಿತ್ರ ನಿರ್ಮಾಪಕ ಫಿರೋಜ್ ನಡಿಯಾಡ್ ವಾಲ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿತ್ತು. ಅವರ ಪತ್ನಿಯನ್ನು ಎನ್ ಸಿ ಬಿ ಬಂಧಿಸಿದೆ.

ಇದೀಗ ಚಿತ್ರ ನಿರ್ಮಾಪಕ ಫಿರೋಜ್ ನಡಿಯಾಡವಾಲ ಅವರು ಮಾದಕ ದ್ರವ್ಯ ನಿಯಂತ್ರಣ ಬ್ಯೂರೋದ ವಿಚಾರಣೆಗೆ ಹಾಜರಾಗಿದ್ದಾರೆ. ಅವರ ವಿಚಾರಣೆ ಮುಂದುವರಿದಿದೆ. ಫಿರೋಜ್ ಅವರ ಪತ್ನಿ  ಶಬನಾ ಸಯೀದ್ ಅವರನ್ನು ಭಾನುವಾರ ಬಂಧಿಸಿದ್ದ ಪೊಲೀಸರು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

ಹಿಂದಿ ಚಿತ್ರರಂಗದ ಮಾನಹಾನಿಕರ ವರದಿ ಪ್ರಸಾರಮಾಡಬೇಡಿ: ದೆಹಲಿ ಹೈಕೋರ್ಟ್ ಆದೇಶ

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!