Monday, April 12, 2021

ಒಂದೇ ದಿನದಲ್ಲಿ ದೇಶದಲ್ಲಿ ನಾಲ್ಕು ಸಾವಿರ ಕೊರೋನಾ ಪ್ರಕರಣ

ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ಸುಂಟರ ಗಾಳಿಯಂತೆ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ 3967 ಮಂದಿ ಹೊಸದಾಗಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 81, 970 ತಲುಪಿದೆ. ಇಷ್ಟು ಬೃಹತ್  ಪ್ರಮಾಣದಲ್ಲಿ ಕೊರೋನಾ ಪ್ರಕರಣ ವರದಿಯಾಗುತ್ತಿರುವುದು ಆತಂಕ ಸೃಷ್ಟಿಸಿದೆ. ಮೂರನೆ ಹಂತದ ಲಾಕ್ ಡೌನ್ ಅಂತ್ಯಗೊಳ್ಳಲು ಕೇವಲ ಎರಡು ದಿನ ಬಾಕಿ ಇರುವಾಗಲೇ ಸೋಂಕಿನ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ಕೊರೋನಾದಿಂದ ಕಳೆದ 24 ಗಂಟೆಯಲ್ಲಿ 100 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ  2649ಕ್ಕೆ ಏರಿದೆ. ವಲಸೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ದೇಶದ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ  ಪ್ರಯಾಣ ಬೆಳೆಸಿದ್ದೆ  ಸೋಂಕು ಹೆಚ್ಚಾಗಲು ಕಾರಣವಾಗಿದೆ ಎಂದು  ವಿಶ್ಲೇಷಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!