Tuesday, April 13, 2021

ಬಂಧಿತ ಭಾರತೀಯನನ್ನು ಬಿಡುಗಡೆಮಾಡಿದ ನೇಪಾಳ

ಪಾಟ್ನಾ: ಭಾರತ- ನೇಪಾಳ ಗಡಿಯಲ್ಲಿ ನಡೆದ ಗುಂಡಿನ ದಾಳಿ ಸಂದರ್ಭದಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದ್ದ ಭಾರತೀಯನೊಬ್ಬನನ್ನು  ನೇಪಾಳ ಬಿಡುಗಡೆ ಮಾಡಿದೆ.  ನೇಪಾಳ ಪೊಲೀಸರ ವಶದಲ್ಲಿದ್ದ ಲಗನ್ ಕಿಶೋರ್ ಸೀತಾಮರಿ ಜಿಲ್ಲೆಯ ತಮ್ಮ ಸ್ವಂತ ಊರಿಗೆ ಮರಳಿ ಬಂದಿದ್ದಾರೆ.  ಭಾರತದ ಭೂ ಪ್ರದೇಶದಲ್ಲಿದ್ದ ಸಂದರ್ಭದಲ್ಲಿ ನೇಪಾಳ ಪೊಲೀಸರು ತನ್ನನ್ನು ತಮ್ಮ ವಶಕ್ಕೆ ತೆಗೆದುಕೊಂಡರು. ಪೊಲೀಸ್ ಠಾಣೆಯಲ್ಲಿ ಚಿತ್ರಹಿಂಸೆ ನೀಡಿದರು ಎಂದು ಕಿಶೋರ್ ಆರೋಪಿಸಿದ್ದಾರೆ. ನೇಪಾಳ ಭೂ ಪ್ರದೇಶದಿಂದಲೇ ಕರೆದುಕೊಂಡು ಬಂದಿರುವುದನ್ನು ಒಪ್ಪಿಕೊಳ್ಳುವಂತೆ ತನ್ನನ್ನು ಬಲವಂತಪಡಿಸಲಾಯಿತು ಎಂದು ಕಿಶೋರ್ ಆರೋಪಿಸಿದ್ದಾರೆ. ಶುಕ್ರವಾರ ನೇಪಾಳ ಗಡಿ ಕಾವಲು ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತದ ನಾಗರಿನೊಬ್ಬ ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿದ್ದರು

ಮತ್ತಷ್ಟು ಸುದ್ದಿಗಳು

Latest News

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೋಂ ಕ್ವಾರಂಟೈನ್

newsics.com ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೊಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಮುಖ್ಯಮಂತ್ರಿ ಕಚೇರಿಯ ಕೆಲವು ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಮುಂಜಾಗ್ರತಾ...

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ ಪ್ರಕರಣ ವರದಿಯಾಗಿದೆ. ರಾಜ್ಯದಲ್ಲಿ ಕೊರೋನಾ ಒಂದೇ ದಿನ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...
- Advertisement -
error: Content is protected !!