newsics.com
ಮುಂಬೈ: ರೇವ್ ಪಾರ್ಟಿ ಸಂಬಂಧ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನವಾಗಿರುವ ಹಿನ್ನೆಲೆಯಲ್ಲಿ ತಂದೆ ಶಾರೂಖ್ ಖಾನ್ ಅವರ ಜಾಹೀರಾತುಗಳು ಕೂಡ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿವೆ.
ಆನ್ ಲೈನ್ ಶಿಕ್ಷಣ ಸಂಸ್ಥೆಯೊಂದರ ಬ್ರಾಂಡ್ ಅಂಬಾಸಿಡರ್ ಆಗಿರುವ ಶಾರೂಖ್ ಖಾನ್ ಜಾಹೀರಾತಿನಲ್ಲಿ ಶಿಕ್ಷಣದ ಮಹತ್ವದ ಬಗ್ಗೆ ಪಾಠ ಹೇಳುತ್ತಿದ್ದಾರೆ.
ಇದೀಗ ಅದನ್ನು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. ಮನೆಯಲ್ಲಿ ಮಗನಿಗೆ ಪಾಠ ಹೇಳಲು ಸಾಧ್ಯವಾಗದ ತಂದೆ ಲೋಕಕ್ಕೆ ಏನು ಪಾಠ ಮಾಡಲು ಸಾಧ್ಯ ಎಂದು ಪ್ರಶ್ನಿಸುತ್ತಿದ್ದಾರೆ.
ಇದೀಗ ಈ ಜಾಹೀರಾತು ಕಳೆದ ಎರಡು ದಿನಗಳಿಂದ ಅತೀ ಕಡಿಮೆ ಸಂಖ್ಯೆಯಲ್ಲಿ ಪ್ರಸಾರವಾಗುತ್ತಿದೆ ಎಂಬ ಮಾತು ಕೂಡ ಕೇಳಿ ಬರುತ್ತಿದೆ.