ಶ್ರೀನಗರ: ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಬಿಜೆಪಿ ಹಿರಿಯ ನಾಯಕ ಮನೋಜ್ ಸಿನ್ಹಾ ಅವರನ್ನು ನೇಮಕ ಮಾಡಲಾಗಿದೆ. ಮುರ್ಮು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ನೂತನ ನೇಮಕಾತಿ ಮಾಡಲಾಗಿದೆ.
2014ರಿಂದ 2019ರ ವರೆಗೆ ಅವರು ಮನೋಜ್ ಸಿನ್ಹಾ ಕೇಂದ್ರ ಸಚಿವರಾಗಿದ್ದರು. ದೂರ ಸಂಪರ್ಕ ಇಲಾಖೆಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಎರಡು ಬಾರಿ ಉತ್ತರಪ್ರದೇಶದ ಗಾಜಿಪುರ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು.
ಅಧಿಕಾರಿಗಳ ಬದಲಿಗೆ ರಾಜಕಾರಣಿಯನ್ನು ಇದೀಗ ಕೇಂದ್ರ ಸರ್ಕಾರ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ನೇಮಕ ಮಾಡಿದೆ. ಇದು ಜಮ್ಮು ಕಾಶ್ಮೀರದಲ್ಲಿ ರಾಜಕೀಯ ಚಟುವಟಿಕೆ ಪುನರಾರಂಭದ ಪ್ರಯತ್ನ ಎಂದು ವಿಶ್ಲೇಷಿಸಲಾಗುತ್ತಿದೆ