Saturday, November 26, 2022

ವಿಸ್ತೃತ ಚರ್ಚೆ ಬಳಿಕವೇ ಹೊಸ ಐಟಿ‌ನಿಯಮ: ಕೇಂದ್ರ ಸ್ಪಷ್ಟನೆ

Follow Us

newsics.com

ನವದೆಹಲಿ: ವಿಸ್ತೃತ ಸಮಾಲೋಚನೆಯ ನಂತರವೇ ಹೊಸ ಐಟಿ ನಿಯಮ‌ ರೂಪಿಸಿರುವುದಾಗಿ ಕೇಂದ್ರ ಸರ್ಕಾರ ಹೇಳಿದೆ.

ಈ‌ ಕುರಿತಂತೆ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ವಾರ್ತಾ ಮತ್ತು ಪ್ರಸಾರ ಸಚಿವಾಲಯಗಳು ವಿಸ್ತೃತ ಸಮಾಲೋಚನೆ ನಡೆಸಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ವಿಶ್ವಸಂಸ್ಥೆಯ ವಿಶೇಷ ವರದಿಗಾರರ ವಿಭಾಗದ ಪತ್ರಕ್ಕೆ ಉತ್ತರ ನೀಡಿರುವ ಕೇಂದ್ರ ಸರ್ಕಾರ, ನೂತನ ಐಟಿ ನಿಯಮಗಳನ್ನು ರೂಪಿಸುವುದಕ್ಕೂ ಮುನ್ನ ಕೈಗೊಂಡ ಚರ್ಚೆ, ಸಮಾಲೋಚನೆ ಹಾಗೂ ಕರಡು ಸಿದ್ಧಪಡಿಸಿದ ಪ್ರಕ್ರಿಯೆ ಕುರಿತು ವಿವರಿಸಿದೆ.

ವಿವಿಧ ವಲಯಗಳಿಂದ ಸ್ವೀಕರಿಸಿದ ಸಲಹೆ–ಸೂಚನೆಗಳ ಕುರಿತು ಅಂತರ್‌ ಸಚಿವಾಲಯದ ಸಭೆಯಲ್ಲಿ ಚರ್ಚೆ ನಡೆಸಿ, ನಂತರ ನಿಯಮಗಳನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಿದೆ.

ಉಗ್ರರ ನೇಮಕಾತಿ, ಅಶ್ಲೀಲ ಮಾಹಿತಿಯ ಪ್ರಸಾರ, ಸೌಹಾರ್ದಕ್ಕೆ ಧಕ್ಕೆ ತರುವ ವಿಷಯಗಳನ್ನು ಹಂಚಿಕೊಳ್ಳುವುದು, ಹಣಕಾಸು ವಂಚನೆ, ಹಿಂಸೆಗೆ ಪ್ರಚೋದನೆ, ಕಾನೂನು–ಸುವ್ಯವಸ್ಥೆಗೆ ಧಕ್ಕೆ ತರುವಂತಹ ಕೃತ್ಯಗಳಿಗೆ ಸಾಮಾಜಿಕ ಮಾಧ್ಯಮಗಳು, ಡಿಜಿಟಲ್‌ ವೇದಿಕೆಗಳು ಬಳಕೆಯಾಗುತ್ತಿದ್ದವು. ಇದಕ್ಕೆ ಕಡಿವಾಣ ಹಾಕುವುದು ಅಗತ್ಯವಿತ್ತು ಎಂದು ಉತ್ತರಿಸುವ ಮೂಲಕ ಸರ್ಕಾರ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!