newsics.com
ತಿರುವನಂತಪುರಂ: ಭಯೋತ್ಪಾದಕ ಸಂಘಟನೆಗಳ ಜತೆ ನಂಟು ಹೊಂದಿದ್ದಾರೆ ಎಂಬ ಶಂಕೆಯ ಆಧಾರದಲ್ಲಿ ರಾಷ್ಟ್ರೀಯ ತನಿಖಾ ದಳ ಕೇರಳದ ಎಂಟು ಪತ್ರಕರ್ತರನ್ನು ವಿಚಾರಣೆಗೆ ಗುರಿಪಡಿಸಿದೆ ಎಂದು ವರದಿಯಾಗಿದೆ.
ಇದರಲ್ಲಿ ಮಹಿಳಾ ಪತ್ರಕರ್ತರೊಬ್ಬರು ಕೂಡ ಸೇರಿದ್ದಾರೆ ಎಂದು ವರದಿಯಾಗಿದೆ. ಕಳೆದ ಹಲವು ತಿಂಗಳಿನಿಂದ ಮಾಹಿತಿ ಕಲೆ ಹಾಕಿದ ಬಳಿಕ ಎಲ್ಲರನ್ನು ವಿಚಾರಣೆಗೆ ಗುರಿಪಡಿಸಲಾಗಿದೆ. ಮಾಹಿತಿ ಸಂಗ್ರಹಿಸಲಾಗಿದೆ ಎಂದು ವರದಿಯಾಗಿದೆ.
ವಿಚಾರಣಗೆ ಗುರಿಯಾದ ಪತ್ರಕರ್ತರ ಮಾಹಿತಿಯನ್ನು ತನಿಖಾ ಸಂಸ್ಥೆ ಬಹಿರಂಗಪಡಿಸಿಲ್ಲ. ಕೇರಳದ ಜನ್ಮಭೂಮಿ ಪತ್ರಿಕೆ ಈ ಸಂಬಂಧ ಮೊದಲ ಬಾರಿಗೆ ವರದಿ ಪ್ರಕಟಿಸಿತ್ತು.