Tuesday, August 9, 2022

ಐವರು‌ ಮಹಿಳೆಯರು ಸೇರಿ 9 ಮಂದಿ ಜಲಸಮಾಧಿ

Follow Us

newsics.com
ಮಹಾರಾಷ್ಟ್ರ: ಪುಣೆ ಜಿಲ್ಲೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ದುರಂತದಲ್ಲಿ 9 ಮಂದಿ‌ ಜಲಸಮಾಧಿಯಾಗಿದ್ದಾರೆ.
ಚಸ್ಕಮಾನ್ ಮತ್ತು ಭಟ್ಘರ್ ಅಣೆಕಟ್ಟಿನ ಹಿನ್ನೀರು ಪ್ರದೇಶದಲ್ಲಿ ಈ ದುರಂತ ಭವಿಸಿದೆ.
ಐವರು ಮಹಿಳೆಯರು, ನಾಲ್ವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಭೀಮಾ ನದಿಯ ಚಸ್ಕಮಾನ್ ಅಣೆಕಟ್ಟಿನ ಹಿನ್ನೀರಿನಲ್ಲಿ ನಾಲ್ವರು ವಿದ್ಯಾರ್ಥಿಗಳು ಗುರುವಾರ ಸಂಜೆ 4 ಗಂಟೆ ಸುಮಾರಿಗೆ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.
ಮತ್ತೊಂದೆಡೆ ವೆಲ್ವಂಡಿ ನದಿಯ ಭಟ್ಘರ್ ಅಣೆಕಟ್ಟಿನ ಹಿನ್ನೀರಿನಲ್ಲಿ ಐವರು ಮಹಿಳೆಯರು ಮುಳುಗಿ ಕೊನೆಯುಸಿರೆಳೆದಿದ್ದಾರೆ ಎಂದು ಪುಣೆ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.
ಕೃಷ್ಣಮೂರ್ತಿ ಫೌಂಡೇಶನ್‌ನ ಸಹ್ಯಾದ್ರಿ ಇಂಟರ್‌ನ್ಯಾಶನಲ್‌ ಸ್ಕೂಲ್‌ನ ಹತ್ತನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಮುಗಿಸಿ ಗುಂಡಲವಾಡಿ ಪ್ರದೇಶಕ್ಕೆ ಈಜಲು ತೆರಳಿದ್ದರು. ಈಜು ಬರದೆ ನಾಲ್ವರು ನೀರಿನಲ್ಲಿ ಮುಳುಗಿದ್ದಾರೆ.
ಮತ್ತೊಂದು ದುರಂತದಲ್ಲಿ ನರೇಗಾಂವ್ ಗ್ರಾಮಕ್ಕೆ ಸಂಬಂಧಿಕರೊಬ್ಬರ ಮದುವೆಗೆ ಬಂದಿದ್ದ ಐವರು ಮಹಿಳೆಯರು, ಭಟ್ಘರ್ ಅಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿ ಬಹಿರ್ದೆಸೆಗೆ ತೆರಳಿದ್ದಾಗ ಆಯತಪ್ಪಿ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾತುಗಾರರ ಶೋಧಕ್ಕೆ ಮುಂದಾದ ಕಾಂಗ್ರೆಸ್‌ನಿಂದ ಭಾಷಣ ಸ್ಪರ್ಧೆ: ವಿಜೇತರಿಗೆ ಐಫೋನ್ ಬಹುಮಾನ

ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು, ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

ಮತ್ತಷ್ಟು ಸುದ್ದಿಗಳು

vertical

Latest News

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌...

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

newsics.com ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ. ಕೊರಚ ಮತ್ತು‌ ಕೊರಮ ಸಮುದಾಯದ ಜನರು ನಾಗರ ಪಂಚಮಿ...

ಯಾವುದೇ ಕಾರಣಕ್ಕೂ ಆಧಾರ್ ಒಟಿಪಿ ಶೇರ್ ಮಾಡಬೇಡಿ: ಸರ್ಕಾರದ ಎಚ್ಚರಿಕೆ

newsics.com ಬೆಂಗಳೂರು: ಆಧಾರ್ ಒಟಿಪಿ, ವೈಯಕ್ತಿಕ ಕಾರ್ಡ್ ವಿವರಗಳನ್ನು ಬಹಿರಂಗಪಡಿಸಬಾರದು ಎಂದು ಸರ್ಕಾರ ಎಚ್ಚರಿಸಿದೆ. ನಿಮ್ಮ ಆಧಾರ್ ಒಟಿಪಿಯನ್ನು ಕೇಳಿ ನಿಮಗೆ ಎಂದಿಗೂ ಕರೆ, SMS ಅಥವಾ ಇಮೇಲ್ ಬರುವುದಿಲ್ಲ ಎಂದು ಆಧಾರ್ ಕಾರ್ಡ್ ಸುರಕ್ಷತೆ...
- Advertisement -
error: Content is protected !!