ನವದೆಹಲಿ: ನಿರ್ಭಯಾ ಪ್ರಕರಣದಲ್ಲಿ ಎಲ್ಲ ಆರೋಪಿಗಳನ್ನು ಒಟ್ಟಿಗೆ ಗಲ್ಲಿಗೇರಿಸಬೇಕು. ಪ್ರತ್ಯೇಕ ಪ್ರತ್ಯೇಕವಾಗಿ ಮರಣ ದಂಡನೆ ಶಿಕ್ಷೆ ಜಾರಿ ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಸ್ಪಷ್ಟಪಡಿಸಿದೆ. ಎಲ್ಲ ಕಾನೂನು ಪ್ರಕ್ರಿಯೆಗಳನ್ನು ಒಂದು ವಾರದೊಳಗೆ ಪೂರ್ಣಗೊಳಿಸುವಂತೆಯೂ ನ್ಯಾಯಾಲಯ ಆದೇಶ ನೀಡಿದ್ದು, ಕೇಂದ್ರ ಸರ್ಕಾರದ ಮನವಿಯನ್ನು ತಳ್ಳಿಹಾಕಿದೆ.