ನವದೆಹಲಿ: ನಿರ್ಭಯಾ ಅತ್ಯಾಚಾರ ಅಪರಾಧಿಗಳಿಗೆ ಮರಣ ದಂಡನೆ ದಿನಾಂಕ ನಿಗದಿಯಾಗಿರುವಂತೆಯೇ ಅಪರಾಧಿ ವಿನಯ್ ಕುಮಾರ್ ಶರ್ಮಾ ಸುಪ್ರೀಂ ಕೋರ್ಟ್ ನಲ್ಲಿ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದಾನೆ. ದೆಹಲಿ ನ್ಯಾಯಾಲಯ ಈಗಾಗಲೇ ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಜನವರಿ 22ರಂದು ಮರಣ ದಂಡನೆ ಶಿಕ್ಷೆ ಜಾರಿಗೊಳಿಸುವಂತೆ ಆದೇಶ ನೀಡಿದೆ.