ನವದೆಹಲಿ: ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪಿಗಳನ್ನು ಗಲ್ಲಿಗೇರಿಸುವ ದಿನಾಂಕ ನಿಗದಿಪಡಿಸಿದ್ದ ಆದೇಶಕ್ಕೆ ದೆಹಲಿ ನ್ಯಾಯಾಲಯ ತಡೆ ನೀಡಿದೆ.
ಅಪರಾಧಿಗಳಿಗೆ ಮರಣದಂಡನೆ ವಿಧಿಸಿರುವ ಆದೇಶವನ್ನು ಮರುಪರಿಶೀಲಿಸುವುದಿಲ್ಲ. ಆದರೆ, ನಾಲ್ವರು ಆರೋಪಿಗಳಲ್ಲಿ ಒಬ್ಬನಾದ ಮುಕೇಶ್ ಸಿಂಗ್ ಎಂಬಾತ ಸಲ್ಲಿಸಿರುವ ಕ್ಷಮಾದಾನದ ಅರ್ಜಿ ಇನ್ನೂ ವಿಚಾರಣಾ ಹಂತದಲ್ಲಿರುವುದರಿಂದ ಆದೇಶದ ಜಾರಿಯನ್ನು ತಡೆಹಿಡಿಯುತ್ತಿದ್ದೇವೆ. ಅವರು ಈಹಿಂದಿನ ಆದೇಶದಂತೆ ಜ. 22ರಂದು ನೇಣಿಗೇರಿಸುವುದಿಲ್ಲ ಎಂದು ಜೈಲಾಧಿಕಾರಿಗಳು ತಮಗೆ ವರದಿ ಸಲ್ಲಿಸಬೇಕು ಎಂದು ನ್ಯಾಯಪೀಠ ತಿಳಿಸಿದೆ.