ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿ ಪವನ್ ಗಲ್ಲು ಶಿಕ್ಷೆ ವಿಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ. . ಕೃತ್ಯ ನಡೆದ ಸಂದರ್ಭದಲ್ಲಿ ತನಗೆ 18 ವರ್ಷವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮರಣ ದಂಡನೆ ವಿಧಿಸಿದ್ದು ಕಾನೂನಿಗೆ ವಿರುದ್ಧವಾಗಿದೆ ಎಂದು ಪವನ್ ಅರ್ಜಿಯಲ್ಲಿ ಆರೋಪಿಸಿದ್ದಾನೆ. ನಿರ್ಭಯಾ ಅತ್ಯಾಚಾರ ಪ್ರಕರಣದ ಎಲ್ಲ ನಾಲ್ವರು ಆರೋಪಿಗಳಿಗೆ ಹೊಸ ಡೆತ್ ವಾರಂಟ್ ಹೊರಡಿಸಲಾಗಿದ್ದು, ಫೆಬ್ರವರಿ 1ಕ್ಕೆ ಶಿಕ್ಷೆ ಜಾರಿಗೊಳಿಸಲು ನಿರ್ಧರಿಸಲಾಗಿದೆ.