ನವದೆಹಲಿ; ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣದಲ್ಲಿ ಮರಣದಂಡನೆಗೆ ಒಳಗಾಗಿರುವ ನಾಲ್ವರು ಅಪರಾಧಿಗಳಲ್ಲೊಬ್ಬನಾದ ವಿನಯ್ ತಿಹಾರ್ ಜೈಲಿನ ಗೋಡೆಗೆ ತಲೆ ಚಚ್ಚಿಕೊಂಡು ಗಾಯ ಮಾಡಿಕೊಂಡಿದ್ದಾನೆ.
ಆತ ಗೋಡೆಗಗೆ ತಲೆ ಚಚ್ಚಿಕೊಳ್ಳುತ್ತಿದ್ದುದನ್ನು ಗಮನಿಸಿದ ತಕ್ಷಣವೇ ಜೈಲು ಅಧಿಕಾರಿಗಳು ತಡೆದಿದ್ದಾರೆ. ಗೋಡೆಗೆ ಬಲವಾಗಿ ತಲೆ ಚಚ್ಚಿಕೊಂಡಿದ್ದರಿಂದ ವಿನಯ್ ಶರ್ಮಾಗೆ ಗಾಯವಾಗಿದ್ದು, ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ. ಮರಣದಂಡನೆಯಿಂದ ತಾತ್ಕಾಲಿಕ ರಿಲೀಫ್ ಪಡೆಯಲು ಹೀಗೆ ಮಾಡಿದ್ದಾನೆ. ತನಗೆ ಸ್ಕಿಜೋಫ್ರೀನಿಯಾ ಕಾಯಿಲೆಯಿದ್ದು, ಚಿಕಿತ್ಸೆ ನೀಡಬೇಕೆಂದು ವಿನಯ್ ಶರ್ಮಾ ಕೇಳಿದ್ದಾನೆ ಎನ್ನಲಾಗಿದೆ.
ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳನ್ನು ಮಾರ್ಚ್ 3ರಂದು ಗಲ್ಲಿಗೇರಿಸುವಂತೆ ದೆಹಲಿ ನ್ಯಾಯಾಲಯ ಸೋಮವಾರ ಆದೇಶಿಸಿತ್ತು.