ನವದೆಹಲಿ: ನಿರ್ಭಯಾ ಪ್ರಕರಣದ ಅಪರಾಧಿಗಳ ವಿರುದ್ದ ಹೊಸ ಡೆತ್ ವಾರಂಟ್ ಜಾರಿಗೊಳಿಸುವಂತೆ ಕೋರಿ ನಿರ್ಭಯಾ ಪೋಷಕರು ದೆಹಲಿ ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ.
ಪ್ರಕರಣದ ನಾಲ್ವರು ಅಪರಾಧಿಗಳ ಪೈಕಿ ಎಲ್ಲರ ಕ್ಷಮಾದಾನ ಅರ್ಜಿಗಳನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ ನಂತರ ಅವರ ಗಲ್ಲಿಗೇರಿಸಲು ದಿನಾಂಕ ನಿಗದಿಪಡಿಸುವಂತೆ ಮನವಿ ಮಾಡುವುದಾಗಿ ನಿರ್ಭಯಾ ಪೋಷಕರು ತಿಳಿಸಿದ್ದಾರೆ. ದೆಹಲಿ ಬಂಧಿಖಾನೆ ನಿಯಮದ ಪ್ರಕಾರ, ಕ್ಷಮಾದಾನ ಅರ್ಜಿ ತಿರಸ್ಕೃತಗೊಂಡ ನಂತರ ಅವರಿಗೆ 14 ದಿನಗಳ ಕಾಲ ಮಾನಸಿಕವಾಗಿ ಸಿದ್ಧಗೊಳ್ಳಲು ಅವಕಾಶ ನೀಡಬೇಕು.