Saturday, November 26, 2022

ವಾಲಿಬಾಲ್ ಟೀಂ ಮಾಜಿ‌ ನಾಯಕಿ, ಮಿಲ್ಕಾ ಸಿಂಗ್ ಪತ್ನಿ ನಿರ್ಮಲಾ‌ ಕೌರ್ ಇನ್ನಿಲ್ಲ

Follow Us

newsics.com

ಚಂಡೀಗಢ(ಹರ್ಯಾಣ): ಭಾರತದ ಮಹಿಳಾ ವಾಲಿಬಾಲ್ ತಂಡದ ಮಾಜಿ ನಾಯಕಿ ಹಾಗೂ ಅಥ್ಲೀಟ್ ದಿಗ್ಗಜ ಮಿಲ್ಖಾ ಸಿಂಗ್ ಅವರ ಪತ್ನಿ ನಿರ್ಮಲಾ ಕೌರ್ (85) ಕೊರೋನಾ ಸೋಂಕಿನಿಂದ ಭಾನುವಾರ ಸಂಜೆ ಸಾವನ್ನಪ್ಪಿದ್ದಾರೆ.

ಎರಡು ವಾರಗಳ ಹಿಂದೆ ನಿರ್ಮಲಾ ಕೌರ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಅವರನ್ಬು ಮೊಹಾಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರಿಗೆ ಪತಿ, ಪುತ್ರ ಹಾಗೂ ಮೂವರು ಪುತ್ರಿಯರಿದ್ದಾರೆ.

ಇಂದು ಸಂಜೆ 4 ಗಂಟೆಗೆ ಕೊರೋನಾದಿಂದ ನಿರ್ಮಲಾ ಮಿಲ್ಖಾ ಸಿಂಗ್ ನಿಧನರಾಗಿದ್ದಾರೆ ಎಂದು ಮಿಲ್ಖಾ ಸಿಂಗ್ ಕುಟುಂಬದ ವಕ್ತಾರರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಮಿಲ್ಖಾ ಕುಟುಂಬದ ಬೆನ್ನೆಲುಬಾಗಿದ್ದ ನಿರ್ಮಲಾ ಅಂತ್ಯಕ್ರಿಯೆಯಲ್ಲಿ ಪತಿ ಮಿಲ್ಖಾ ಸಿಂಗ್ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ. ಯಾಕೆಂದರೆ ಅವರೂ ಸಹ ಪಿಜಿಐಎಂಆರ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಹಾಗೂ ನ್ಯುಮೇನಿಯಾದಿಂದ ಬಳಲುತ್ತಿದ್ದ ಮಿಲ್ಖಾರನ್ನು ಆಸ್ಪತ್ರೆಗೆ ಸೇರಿಸಿದ ಎರಡು ದಿನಗಳ ನಂತರ ನಿರ್ಮಲಾ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು.

ಮೂಗಿನೊಳಗೇ ಮುರಿಯಿತು ಕೋವಿಡ್ ಸ್ವ್ಯಾಬ್ ಸ್ಟಿಕ್!

ನಟ ಸಂಚಾರಿ ವಿಜಯ್ ಸ್ಥಿತಿ ಮತ್ತಷ್ಟು ಗಂಭೀರ: ಹೆಲ್ತ್ ಬುಲೆಟಿನ್ ಮಾಹಿತಿ

ಇನ್ನೈದು ದಿನ ರಾಜ್ಯದ ಹಲವೆಡೆ ಭಾರೀ ಮಳೆ, ಕರಾವಳಿಯಲ್ಲಿ ರೆಡ್ ಅಲರ್ಟ್

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!