Saturday, April 17, 2021

ನಿರ್ಮಲಾ ಸೀತಾರಾಮನ್ ಇಂದು ಐದನೇ ಪತ್ರಿಕಾಗೋಷ್ಠಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬೆಳಿಗ್ಗೆ 11 ಗಂಟೆಗೆ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ನಿರ್ಮಲಾ ಅವರು ಸಾಂಸ್ಥಿಕ ಸುಧಾರಣೆಗೆ ಆದ್ಯತೆ ನೀಡಿದ್ದರು. ಮುಖ್ಯವಾಗಿ ಕಲ್ಲಿದ್ದಲು ಮತ್ತು ಖನಿಜ ಕ್ಷೇತ್ರಗಳಲ್ಲಿ ಖಾಸಗಿ ಸಹಭಾಗಿತ್ವಕ್ಕೆ ಅವಕಾಶ ನೀಡುವುದಾಗಿ ಪ್ರಕಟಿಸಿದ್ದರು. ರಕ್ಷಣಾ ಕ್ಷೇತ್ರದಲ್ಲಿ  ವಿದೇಶಿ ನೇರ ಹೂಡಿಕೆಯನ್ನು ಶೇಕಡ 49ರಿಂದ ಶೇಕಡ 74ರ ವರೆಗೆ ಹೆಚ್ಚಿಸಲು ಸರ್ಕಾರ  ನಿರ್ಧರಿಸಿರುವುದಾಗಿ ಪ್ರಕಟಿಸಿದ್ದರು. ಇಂದು ಮಧ್ಯಮ ವರ್ಗವನ್ನು ಗಮನದಲ್ಲಿರಿಸಿಕೊಂಡು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಪ್ರಕಟಿಸುವ ಸಾಧ್ಯತೆಗಳಿವೆ. ಮಧ್ಯಮ ವರ್ಗ ಬಿಜೆಪಿಯ ಅತೀ ದೊಡ್ಡ  ವೋಟ್ ಬ್ಯಾಂಕ್ ಆಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ  ಮಧ್ಯಮ ವರ್ಗದ ನೆರವಿಗೆ ಧಾವಿಸದಿದ್ದರೆ ಮುಂದೆ ಚುನಾವಣೆಯಲ್ಲಿ ಪ್ರತಿಕೂಲ ಪರಿಣಾಮ ಉಂಟಾಗಲಿದೆ ಎಂದು ಹಲವು ಬಿಜೆಪಿ ನಾಯಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!